ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 50 ವರ್ಷದ ಮಹಿಳೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಖಚಿತಪಡಿಸಿದ್ದಾರೆ.
ಕೊಪ್ಪಳದಲ್ಲಿ ಕೊರೊನಾಗೆ ಮೊದಲ ಬಲಿ: ಮಹಾಮಾರಿಗೆ ಮಹಿಳೆ ಸಾವು - ಕೊಪ್ಪಳದಲ್ಲಿ ಕೊರೊನಾ ಪ್ರಕರಣ
ಕೊಪ್ಪಳದಲ್ಲಿ ಕೋವಿಡ್ -19 ಸೋಂಕಿಗೆ 50 ವರ್ಷದ ಮಹಿಳೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಖಚಿತಪಡಿಸಿದ್ದಾರೆ.
ಕೊಪ್ಪಳದಲ್ಲಿ ಕೊರೊನಾಗೆ ಮೊದಲ ಬಲಿ
ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದ ಸೋಂಕಿತ 50 ವರ್ಷದ ಮಹಿಳೆ P -7105 ಮೃತಪಟ್ಟಿದ್ದಾರೆ. ಜೂನ್ 15 ರಂದು ಈ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಗನಿಂದ ತಂದೆ-ತಾಯಿಗೆ ಸೋಂಕು ತಗುಲಿತ್ತು.
ದಂಪತಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿತ್ತು. ಮಹಿಳೆ ಮೃತಪಟ್ಟಿದ್ದರಿಂದ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.