ಕುಷ್ಟಗಿ /ಕೊಪ್ಪಳ: ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಇಂದು ಬೆಳಗ್ಗೆ ಸಾವನ್ನಪ್ಪಿರುವ ಘಟನೆ ಕುಷ್ಟಗಿ ತಾಲೂಕಿನ ದೊಟೀಹಾಳ ಗ್ರಾಮದಲ್ಲಿ ನಡೆದಿದೆ.
ಕುಷ್ಟಗಿ: ವಿದ್ಯುತ್ ಸ್ಪರ್ಶಿಸಿ ಯುವಕ ಸಾವು - ವಿದ್ಯುತ್ ಸ್ಪರ್ಶಿಸಿ ಯುವಕ ಸಾವು ನ್ಯೂಸ್
ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಇಂದು ಬೆಳಗ್ಗೆ ಸಾವನ್ನಪ್ಪಿರುವ ಘಟನೆ ಕುಷ್ಟಗಿ ತಾಲೂಕಿನ ದೊಟೀಹಾಳ ಗ್ರಾಮದಲ್ಲಿ ನಡೆದಿದೆ.
![ಕುಷ್ಟಗಿ: ವಿದ್ಯುತ್ ಸ್ಪರ್ಶಿಸಿ ಯುವಕ ಸಾವು Died](https://etvbharatimages.akamaized.net/etvbharat/prod-images/768-512-12:04:38:1593153278-kn-kst-01-26-current-shock-kac10028-26062020120226-2606f-1593153146-777.jpg)
Died
ಗಣೇಶ ಗಡಾದ ಮೃತ ಯುವಕ. ಮಧ್ಯರಾತ್ರಿ ಮಳೆಯಾಗಿತ್ತು. ಬೆಳಗ್ಗೆ ಮನೆಯಲ್ಲಿ ಕರೆಂಟ್ ಇಲ್ಲವೆಂದು ಗಣೇಶ ಕೂಡಲೇ ಕಂಬ ಎರಿ ದುರಸ್ತಿಗೆ ಮುಂದಾಗಿದ್ದ. ಆ ವೇಳೆ ವಿದ್ಯುತ್ ಪ್ರವಹಿಸಿ ಅಲ್ಲಿಂದ ಬಿದ್ದು ಅಸ್ವಸ್ಥನಾಗಿದ್ದ. ಕೂಡಲೇ ಆತನನ್ನು ಆರೋಗ್ಯ ಇಲಾಖೆ ಉಪಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.