ಕರ್ನಾಟಕ

karnataka

ETV Bharat / state

ಹಾಸ್ಟೆಲ್​​​​​ ವಿದ್ಯಾರ್ಥಿಗಳ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ - Death of hostel students case

ನಗರದ ಬನ್ನಿಕಟ್ಟಿ ಪ್ರದೇಶದ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ‌ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

ಹಾಸ್ಟೆಲ್ ವಿದ್ಯಾರ್ಥಿಗಳ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

By

Published : Aug 19, 2019, 8:32 AM IST

ಕೊಪ್ಪಳ: ಜಿಲ್ಲೆಯ ಬಿಸಿಎಂ ಹಾಸ್ಟೆಲ್​ನಲ್ಲಿ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶವಾಗಾರದ ಬಳಿ ಪೊಲೀಸರು ಹಾಗೂ ಪ್ರಗತಿಪರ ಸಂಘಟನೆಗಳ‌ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

ಹಾಸ್ಟೆಲ್ ವಿದ್ಯಾರ್ಥಿಗಳ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರಗತಿಪರ ಸಂಘಟನೆಗಳ ಮುಖಂಡರಾದ ಬಸವರಾಜ ಶೀಲವಂತರ ಹಾಗೂ ಡಿ.ಹೆಚ್.ಪೂಜಾರ ಘಟನೆ ಹಿನ್ನೆಲೆಯಲ್ಲಿ ಶವಾಗಾರದ ಬಳಿ ಬಂದಿದ್ದರು. ಅಮಾಯಕ ವಿದ್ಯಾರ್ಥಿಗಳ ಸಾವಿಗೆ ಕಾರಣರಾದವರ ಮೇಲೆ‌ ಕ್ರಮ ಕೈಗೊಳ್ಳಬೇಕು ಮತ್ತು ಮೃತ ವಿದ್ಯಾರ್ಥಿಗಳ ಪ್ರತಿ ಕುಟುಂಬಕ್ಕೆ ತಲಾ‌ ₹ 20 ಲಕ್ಷ ಪರಿಹಾರ ಹಾಗೂ ಸರ್ಕಾರಿ ಕೆಲಸ ಕೊಡಬೇಕು. ಅಲ್ಲಿಯವರೆಗೂ ಶವಗಳನ್ನು ಸಾಗಿಸಬೇಡಿ ಎಂದು ತಾಕೀತು ಮಾಡಿದರು‌.

ಆ ಹೊತ್ತಿಗಾಗಲೇ ಮೃತ ವಿದ್ಯಾರ್ಥಿಗಳ ಪಾಲಕರ‌ ಮನವೊಲಿಸಿ ಶವಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಂಸದ ಸಂಗಣ್ಣ ಕರಡಿ ಅವರ ಬಳಿ ಪ್ರಗತಿಪರ ಮುಖಂಡರು ಈ ವಿಚಾರಗಳೊಂದಿಗೆ ಒತ್ತಾಯಿಸುತ್ತಿದ್ರು. ಸಿಎಂ ಈಗಾಗಲೇ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರಿಗೆ ಸಂಸದ ಸಂಗಣ್ಣ ಕರಡಿ ಮನವರಿಕೆ ಮಾಡಿದರು.

ABOUT THE AUTHOR

...view details