ಕೊಪ್ಪಳ :ಗಂಗಾವತಿಯನ್ನು ಕೇಂದ್ರವನ್ನಾಗಿಟ್ಟುಕೊಂಡು ನೂತನ ಜಿಲ್ಲೆಯನ್ನು ರಚಿಸಬೇಕೆಂಬ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆ ಅಸ್ತಿತ್ವಕ್ಕೆ ಬಂದಿರುವ ಜಿಲ್ಲಾ ಸಮಿತಿಯಿಂದ ಹೋರಾಟವನ್ನು ತೀವ್ರಗೊಳಿಸುವ ಸಂಬಂಧ ರೂಪುರೇಷೆ ತಯಾರಿಸಲಾಗುತ್ತಿದೆ ಎಂದು ಸಮಿತಿಯ ಸಂಚಾಲಕರು ಹೇಳಿದ್ದಾರೆ.
ಇಲ್ಲಿನ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಂಚಾಲಕ ಸಂತೋಷ್ ಕೇಲೋಜಿ, ಸಿಂಗನಾಳ ಸುರೇಶ, ಜೋಗದ ನಾರಾಯಣ ಮತ್ತಿತರರು, ಹೋರಾಟಕ್ಕೆ ತೀವ್ರತೆ ನೀಡುವ ಸಂಬಂಧ ಸೆ.28 ರಂದು ಗುರುವಾರ ಬೆಳಗ್ಗೆ 10 ಗಂಟೆಗೆ ಜುಲೈ ನಗರದಲ್ಲಿರುವ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ನಗರದಲ್ಲಿರುವ ಎಲ್ಲಾ ಸಂಘ-ಸಂಸ್ಥೆಗಳ, ಪ್ರಮುಖ ಸಂಘಟನೆಗಳ ಅಧ್ಯಕ್ಷರ ಮತ್ತು ಪ್ರಮುಖ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಗಂಗಾವತಿ ಜಿಲ್ಲಾ ಹೋರಾಟಕ್ಕೆ ಬೆಂಬಲಿಸಲು ಮನವಿ ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿ :ಬೆಂಗಳೂರಿನಲ್ಲಿ ಕಾವೇರಿ ಹೋರಾಟಕ್ಕೆ ಭಾರಿ ಬೆಂಬಲ.. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಕ್ಕೆ ಮುಖ್ಯಮಂತ್ರಿ ಚಂದ್ರು ಕಿಡಿ
ನೂತನ ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಕಂಪ್ಲಿ, ಕನಕಗಿರಿ, ಕಾರಟಗಿ, ಗಂಗಾವತಿ, ತಾವರಗೇರಾ ಒಳಗೊಂಡಂತೆ ಸಭೆಗಳನ್ನು ನಡೆಸಿ ಸ್ಥಳೀಯ ಬೆಂಬಲ ಕೋರಲಾಗಿದೆ. ಈ ಸಂಬಂಧ ಎಲ್ಲಾ ಕಡೆಯಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಅಲ್ಲದೆ, ಸಿಂಧನೂರಿನ ಪ್ರಮುಖರನ್ನೂ ಭೇಟಿಯಾಗಿದ್ದು, ಅಲ್ಲೂ ಕೆಲವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಇನ್ನೂ ಕೆಲವರು ಸಿಂಧನೂರು ಜಿಲ್ಲಾ ಹೋರಾಟ ಮಾಡಲು ಮುಂದಾಗಿದ್ದಾರೆ. ಅವರಿಂದಲೂ ಸಹಕಾರ ಸಿಕ್ಕರೆ ಅವರನ್ನೂ ಒಳಗೊಂಡಂತೆ ನೂತನ ಜಿಲ್ಲೆ ಅಸ್ತಿತ್ವಕ್ಕೆ ತರಲು ಹೋರಾಟ ಮಾಡಲಾಗುವುದು.