ಕರ್ನಾಟಕ

karnataka

ETV Bharat / state

ಕೊಪ್ಪಳ: ಬಿಸಿಯೂಟ ತಯಾರಕರ ಬಾಕಿ ವೇತನ ಬ್ಯಾಂಕ್​ ಖಾತೆಗೆ ಜಮೆ ಮಾಡಲು ಆಗ್ರಹ - ಅಂಗನವಾಡಿ ಕಾರ್ಯಕರ್ತೆಯರು

ಸರ್ಕಾರ ಬಿಡುಗಡೆ ಮಾಡಿರುವ ಮೂರು ತಿಂಗಳ ವೇತನ ನಮ್ಮ ಖಾತೆಗೆ ಜಮೆ ಮಾಡಬೇಕು ಎಂದು ಬಿಸಿಯೂಟ ತಯಾರಕ ಸಿಬ್ಬಂದಿ ಮನವಿ ಮಾಡಿದರು.

dsd
ಬಿಸಿಯೂಟ ತಯಾರಕರ ಬಾಕಿ ವೇತನ ಜಮೆಗೆ ಆಗ್ರಹ

By

Published : Oct 7, 2020, 2:24 PM IST

ಕೊಪ್ಪಳ: ಬಿಸಿಯೂಟ ತಯಾರಕ ನೌಕರರ ಬಾಕಿ ವೇತನ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಬಿಸಿಯೂಟ ತಯಾರಕರ ಬಾಕಿ ವೇತನ ಬ್ಯಾಂಕ್​ ಖಾತಗೆಗೆ ಜಮೆ ಮಾಡಲು ಆಗ್ರಹ

ಅತ್ಯಂತ ಕಡಿಮೆ ಸಂಬಳದಲ್ಲಿ ಸುಮಾರು ವರ್ಷಗಳಿಂದ ಬಿಸಿಯೂಟ ತಯಾರಿಕ ಕೆಲಸ ಮಾಡುತ್ತಿದ್ದೇವೆ. ಕಳೆದ ಆರು ತಿಂಗಳ ವೇತನ ಬರಬೇಕಿದೆ. ಈಗ ಸರ್ಕಾರ ಮೂರು ತಿಂಗಳ ವೇತನ ಬಿಡುಗಡೆ ಮಾಡಿದೆ. ಆದರೆ ಜಿಲ್ಲೆಯಲ್ಲಿ ಬಿಸಿಯೂಟ ತಯಾರಕ ಸಿಬ್ಬಂದಿಗೆ ವೇತನಕ್ಕೆ ಸಂಬಂಧಿಸಿದ ಅಧಿಕಾರಿಗಳು ನಮ್ಮ ಖಾತೆಗೆ ಹಣ ಜಮೆ ಮಾಡಿಲ್ಲ. ಇದರಿಂದಾಗಿ ನಮಗೆ ತೊಂದರೆಯಾಗಿದೆ ಎಂದು ಆರೋಪಿಸಿದ್ದಾರೆ.

ಕೊರೊನಾದಿಂದಾಗಿ ಸಂಕಷ್ಟಕ್ಕೆ‌ ಸಿಲುಕಿರುವ ಬಿಸಿಯೂಟ ತಯಾರಿಕಾ ಮಹಿಳೆಯರಿಗೆ ಐದು ಸಾವಿರ ರೂಪಾಯಿ ಪರಿಹಾರ ಧನ, ಕನಿಷ್ಠ ವೇತನ, ಸಮವಸ್ತ್ರ, ನಿವೃತ್ತಿ ಬಳಿಕ ಪಿಂಚಣಿ ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಬಿಸಿಯೂಟ ತಯಾರಕ ಮಹಿಳೆಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ABOUT THE AUTHOR

...view details