ಕುಷ್ಟಗಿ (ಕೊಪ್ಪಳ): ತಾಲೂಕಿನ ಕಂದಕೂರು ಗ್ರಾಮದ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ರಸ್ತೆಯುದ್ದಕ್ಕೂ ತಗ್ಗು ಗುಂಡಿಗಳು ಸೃಷ್ಟಿಯಾಗಿದ್ದು, ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ.
ಕುಷ್ಟಗಿ: ಶಾಲಾ ಮುಖ್ಯ ರಸ್ತೆ ಸರಿಪಡಿಸುವಂತೆ ಆಗ್ರಹ - ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮ
ಹಾಳಾದ ರಸ್ತೆಯನ್ನು ಸರಿಪಡಿಸಬೇಕು ಎಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಶಾಲಾ ಮುಖ್ಯ ರಸ್ತೆ ಸರಿಪಡಿಸುವಂತೆ ಆಗ್ರಹ
ಕಂದಕೂರ ಗ್ರಾಮದಲ್ಲಿ ಓಣಿ ಆಯಕಟ್ಟಿನ ರಸ್ತೆಗಳು ಸಿಮೆಂಟ್ ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೊಂಡಿದ್ದು, ಶಾಲೆಯ ಮುಖ್ಯ ರಸ್ತೆ ಸುಧಾರಿಸದೇ ಇರುವ ಶಾಲೆ ರಸ್ತೆಯ ಬಗ್ಗೆ ತಾತ್ಸಾರವೇ ಎಂಬ ಪ್ರಶ್ನೆ ಸಾರ್ವಜನಿಕವಾಗಿ ವ್ಯಕ್ತವಾಗಿದೆ. ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದಿರುವ ಹಿನ್ನೆಲೆ ಮಳೆ ನೀರು ನಿಂತು ಕೆಸರು ಗದ್ದೆಯಂತಾಗಿದೆ.
ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚಿ ಶಾಲೆ ಅರಂಭವಾಗುವುದರ ಒಳಗಾಗಿ ಅವ್ಯವಸ್ಥೆ ಸರಿಪಡಿಸಬೇಕು. ಇದಕ್ಕೆ ಸ್ಪಂದಿಸದಿದ್ದರೆ ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.