ಕರ್ನಾಟಕ

karnataka

ETV Bharat / state

ಕಂಪ್ಲಿ ಸೇತುವೆ ಮುಳುಗಡೆ: ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸ್ಥಗಿತ

ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯನ್ನು ನೇರವಾಗಿ ಸಂಪರ್ಕಿಸುತ್ತಿದ್ದ ಕಂಪ್ಲಿಯ ಸೇತುವೆ ಮುಳುಗಡೆಯಾಗಿದ್ದು, ಇದೀಗ ಉಭಯ ಜಿಲ್ಲೆಗಳ ಮಧ್ಯೆ ರಸ್ತೆ ಸಂಚಾರ ಸ್ಥಗಿತವಾಗಿದೆ.

gangavathi
ಕಂಪ್ಲಿ ಸೇತುವೆ ಮುಳುಗಡೆ

By

Published : Aug 19, 2020, 7:38 PM IST

ಗಂಗಾವತಿ: ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯನ್ನು ನೇರವಾಗಿ ಸಂಪರ್ಕಿಸುತ್ತಿದ್ದ ಕಂಪ್ಲಿಯ ಸೇತುವೆ ಮುಳುಗಡೆಯಾಗಿದ್ದು, ಉಭಯ ಜಿಲ್ಲೆಗಳ ಮಧ್ಯೆ ನೇರ ರಸ್ತೆ ಸಂಚಾರ ಸ್ಥಗಿತವಾಗಿದೆ. ಕಂಪ್ಲಿಯ ಸೇತುವೆ ಮೇಲೆ ಯಾವುದೇ ಸಂಚಾರಕ್ಕೆ ಅವಕಾಶವಿಲ್ಲದಂತೆ ಪೊಲೀಸರು ಪಹರೆ ಕಾಯುತ್ತಿದ್ದಾರೆ.

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಗೆ ಕೇವಲ ಎರಡು ಅಡಿ ಮಾತ್ರ ಬಾಕಿ ಉಳಿದಿದೆ. ಪ್ರವಾಹದ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಿದ್ದಾರೆ.

ಕಂಪ್ಲಿ ಸೇತುವೆ ಮುಳುಗಡೆ

ಸೇತುವೆ ದುರ್ಬಲವಾಗಿರುವ ಕಾರಣಕ್ಕೆ ಪೊಲೀಸರು ದ್ವಿಚಕ್ರ ವಾಹನಗಳಿಗೆ ಸೇತುವೆ ಮೇಲೆ ಸಂಚರಿಸಲು ಅವಕಾಶ ಮಾಡಿಕೊಡುತ್ತಿಲ್ಲ. ನದಿಯಲ್ಲಿ ಈಗಾಗಲೇ 80 ಸಾವಿರ ಕ್ಯುಸೆಕ್ ಪ್ರಮಾಣದ ನೀರು ಹರಿಸಲಾಗುತ್ತಿದೆ. ಒಂದು ಲಕ್ಷ ಕ್ಯುಸೆಕ್ ನೀರು ಹರಿಸಿದರೆ ಸೇತುವೆ ಸಂಪೂರ್ಣ ಮುಳುಗಡೆಯಾಗುತ್ತದೆ.

ABOUT THE AUTHOR

...view details