ಕೊಪ್ಪಳ: ಜಿಲ್ಲೆಯಲ್ಲಿ ಇಂದು 39 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 11,583 ಕ್ಕೆ ಏರಿಕೆಯಾಗಿದೆ. ಆದರೆ ಇಂದು ಯಾವುದೇ ಸೋಂಕಿತರ ಸಾವು ಸಂಭವಿಸಿಲ್ಲ.
ಕೊಪ್ಪಳ ಜಿಲ್ಲೆಯಲ್ಲಿ ಇಂದು 39 ಕೊರೊನಾ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 11,583 ಕ್ಕೇರಿಕೆ...
ಕೊಪ್ಪಳ ಜಿಲ್ಲೆಯಲ್ಲಿ ಇಂದು 39 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 11,583 ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 10, ಕೊಪ್ಪಳ ತಾಲೂಕಿನಲ್ಲಿ 12, ಕುಷ್ಟಗಿ ತಾಲೂಕಿನಲ್ಲಿ 05 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 12 ಪ್ರಕರಣ ಸೇರಿ ಇಂದು ಒಟ್ಟು 39 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಸೋಂಕಿನಿಂದ ಒಟ್ಟು 235 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 202 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಒಟ್ಟು 9,435 ಜನರು ಗುಣಮುಖರಾಗಿದ್ದಾರೆ. 1,756 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.