ಕರ್ನಾಟಕ

karnataka

ETV Bharat / state

ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕುಷ್ಟಗಿ ತಾಲೂಕಿನ ಮೂವರು ಆಯ್ಕೆ - ಕುಷ್ಟಗಿ ಸುದ್ದಿ

ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಭಾಜನರಾಗಿದ್ದಾರೆ. ಕೊಪ್ಪಳದಲ್ಲಿ ಇಂದು ಜಿಲ್ಲಾಡಳಿತದ ಜೆ.ಎಹೆಚ್.ಪಟೇಲ್ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

By

Published : Sep 7, 2020, 9:00 AM IST

ಕುಷ್ಟಗಿ (ಕೊಪ್ಪಳ):ಶಿಕ್ಷಕರ ದಿನಾಚರಣೆ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡುವ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಭಾಜನರಾಗಿದ್ದಾರೆ. ಕೊಪ್ಪಳದಲ್ಲಿ ಇಂದು ಜಿಲ್ಲಾಡಳಿತದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಪ್ರೌಢ ಶಾಲೆ ವಿಭಾಗ: ಎಸ್​​ವೈ ಕಂಚಿ, ಸಹ ಶಿಕ್ಷಕರು, ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಹಿರಿಯ ಮನ್ನಾಪುರ.

ಹಿರಿಯ ಪ್ರಾಥಮಿಕ ವಿಭಾಗ: ಲಂಕೆಪ್ಪ ವಾಲೀಕಾರ, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುರುಬಗೇರ ಹನುಮಸಾಗರ.

ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಬಸವರಾಜ ರೊಡ್ಡ, ಸಹ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಲಕಾಪುರ. ಸರ್ಕಾರಿ ಶಾಲೆಯ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ ಸಾಧಕ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮಗ್ಗದ್ ಅಭಿನಂದಿಸಿದ್ದಾರೆ.

ABOUT THE AUTHOR

...view details