ಗಂಗಾವತಿ: ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವ ಪಡೆಯಲು ಬಂದ ಸಂಬಂಧಿಕರು ಅನುಚಿತವಾಗಿ ವರ್ತಿಸಿದ ಹಿನ್ನೆಲೆ ವೈದ್ಯರು ಹಾಗೂ ಸಿಬ್ಬಂದಿಗಳು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆಯಿತು.
ಇಲ್ಲಿನ ಉಪ ವಿಭಾಗ ಆಸ್ಪತ್ರೆಯ ಆಡಳಿತಾಧಿಕಾರಿ ಈಶ್ವರ ಸವುಡಿ ನೇತೃತ್ವದಲ್ಲಿ ಸುಮಾರು ಹದಿನೈದಕ್ಕೂ ಹೆಚ್ಷು ಸಿಬ್ಬಂದಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು. ಕ್ರಮ ತೆಗದುಕೊಳ್ಳದಿದ್ದರೆ ನಾಳೆಯಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವುದಾಗಿ ಸಿಬ್ಬಂದಿ ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಧರಣಿ ನಿರತರ ಮನವೊಲಿಸಿದರು. ಕೋವಿಡ್ ನಂತ ಸಂಕಷ್ಟ ಸಮಯದಲ್ಲಿ ಪ್ರತಿಭಟನೆ ಸರಿಯಲ್ಲ. ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು. ಬಳಿಕ ವೈದ್ಯರು ಹಾಗೂ ಸಿಬ್ಬಂದಿ ಪ್ರತಿಭಟನೆ ಹಿಂಪಡೆದರು.