ಕರ್ನಾಟಕ

karnataka

ETV Bharat / state

ಹೊಸಳ್ಳಿ ಗ್ರಾಮದಲ್ಲಿ 50ಕ್ಕೂ ಹೆಚ್ಚು ಜನರಿಗೆ ಜ್ವರ: ವೈದ್ಯರ ತಂಡ ದೌಡು

ಹೊಸಳ್ಳಿ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರಲ್ಲಿ ಜ್ವರ ಕಾಣಿಸಿಕೊಂಡಿರುವ ಕಾರಣ ವೈದ್ಯರ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

By

Published : Apr 15, 2021, 9:19 AM IST

Doctors Team Visits
ಒಂದೇ ಗ್ರಾಮದಲ್ಲಿ 50ಕ್ಕೂ ಹೆಚ್ಚು ಜನರಿಗೆ ಜ್ವರ: ವೈದ್ಯರ ದಂಡು ದೌಡು

ಗಂಗಾವತಿ:ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮ ಪಂಚಾಯಿತಿಯ ಹೊಸಳ್ಳಿ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರಿಗೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯರ ತಂಡ ಗ್ರಾಮಕ್ಕೆ ಭೇಟಿ ನೀಡಿದೆ.

ಗ್ರಾಮದಲ್ಲಿ ಜ್ವರದಿಂದ ಬಳಲುತ್ತಿದ್ದವರನ್ನು ತಪಾಸಣೆ ನಡೆಸಿರುವ ವೈದ್ಯರು, ಸೂಕ್ತ ಮುಂಜಾಗ್ರತೆ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಕೆಲವರಿಗೆ ಚಿಕಿತ್ಸೆಯನ್ನೂ ನೀಡಲಾಗಿದೆ. ಈ ಪೈಕಿ ಗಂಗಾವತಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರಿಗೆ ಡೆಂಗ್ಯೂ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರಿಗೆ ಕಿಟ್ ಮೂಲಕ ಪರೀಕ್ಷಿಸಿದಾಗ ಡೆಂಗ್ಯೂ ಪಾಸಿಟಿವ್ ಬಂದಿದೆ. ಹೀಗಾಗಿ ಹೆಚ್ಚಿನ ಪರೀಕ್ಷೆಗೆ ರಕ್ತ ಸಂಗ್ರಹಿಸಿ ಕಳುಹಿಸಲಾಗಿದೆ. ಉಳಿದಂತೆ ಗ್ರಾಮದಲ್ಲಿ ಕಂಡುಬಂದಿರುವ ಜ್ವರ ಪ್ರಕರಣಗಳು ಸಾಮಾನ್ಯವಾಗಿ ವಾತಾವರಣದಲ್ಲಿನ ತಾಪಮಾನದಿಂದಾಗಿ ಉಂಟಾಗಿದೆ. ಈ ಬಗ್ಗೆ ಹೆಚ್ಚು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಹೊಸಳ್ಳಿಯಲ್ಲಿ 50ಕ್ಕೂ ಹೆಚ್ಚು ಜನರಲ್ಲಿ ಜ್ವರ: ಆರೋಗ್ಯ ಇಲಾಖೆ ನಿರ್ಲಕ್ಷ್ಯ ಆರೋಪ

ABOUT THE AUTHOR

...view details