ಕುಷ್ಟಗಿ (ಕೊಪ್ಪಳ):ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಮುಂದೆ ಬರಲಿರುವ ಮಸ್ಕಿ ಉಪ ಚುನಾವಣೆಯಲ್ಲಿ ಖರ್ಚು ಮಾಡಲು ತಮ್ಮ ಪಕ್ಷದಲ್ಲಿ ಹಣವಿಲ್ಲ ಎಂದು ಹೇಳಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಾಗಿದೆ ಎಂದು ಮಾಜಿ ಶಾಸಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ ವ್ಯಂಗ್ಯವಾಡಿದರು.
ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಾಗಿದೆ: ಬಯ್ಯಾಪೂರ ವಿರುದ್ಧ ದೊಡ್ಡನಗೌಡ ಪಾಟೀಲ ವಾಗ್ದಾಳಿ - Amaregowda Patil Biayapura statement
ಮುಂದೆ ಬರಲಿರುವ ಮಸ್ಕಿ ಉಪ ಚುನಾವಣೆಯಲ್ಲಿ ಖರ್ಚು ಮಾಡಲು ತಮ್ಮ ಪಕ್ಷದಲ್ಲಿ ಹಣವಿಲ್ಲ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿಕೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ ಪ್ರತಿಕ್ರಿಯೆ ನೀಡಿದ್ದು, ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
![ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಾಗಿದೆ: ಬಯ್ಯಾಪೂರ ವಿರುದ್ಧ ದೊಡ್ಡನಗೌಡ ಪಾಟೀಲ ವಾಗ್ದಾಳಿ ದೊಡ್ಡನಗೌಡ ಪಾಟೀಲ](https://etvbharatimages.akamaized.net/etvbharat/prod-images/768-512-9789978-thumbnail-3x2-lek.jpg)
ದೊಡ್ಡನಗೌಡ ಪಾಟೀಲ
ಬಿಜೆಪಿ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿದ ದೊಡ್ಡನಗೌಡ ಪಾಟೀಲ
ಕುಷ್ಟಗಿಯ ಬುತ್ತಿ ಬಸವೇಶ್ವರ ದೇವಸ್ಥಾನದ ಸಭಾ ಮಂಟಪದಲ್ಲಿ ಬಿಜೆಪಿ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಲ್ಲಿನ ಶಾಸಕರು ಮಸ್ಕಿಗೆ ಹೋಗಿ ಬಿಜೆಪಿಯವರ ಹಣದಿಂದ ಚುನಾವಣೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಬಳಿ ಹಣವಿಲ್ಲ ಎಂದು ಹೇಳುವ ಪಾಲಿಸಿದಾರ ಎಂದು ಶಾಸಕ ಅಮರೇಗೌಡ ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಇಲ್ಲಿನ ಜನರಿಗೆ ಹಣದ ರುಚಿ ತೋರಿಸಿದವರು ಅವರೇ, ಈ ಹಿಂದಿನ ಎಲ್ಲಾ ಚುನಾವಣೆಗಳು ವಿಶ್ವಾಸದ ಮೇಲೆ ನಡೆಯುತ್ತಿದ್ದವು, ಬಯ್ಯಾಪೂರ ಕುಷ್ಟಗಿ ಕ್ಷೇತ್ರಕ್ಕೆ ಕಾಲಿಟ್ಟ ಮೇಲೆ ಚುನಾವಣೆಯಲ್ಲಿ ಹಣದ ಪ್ರಭಾವ ಜಾಸ್ತಿಯಾಗಿದೆ ಎಂದರು.