ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಬೀದಿ ನಾಯಿಗಳು ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ.
ಬೀದಿನಾಯಿಗಳ ದಾಳಿ ಮಹಿಳೆಗೆ ಗಂಭೀರ ಗಾಯ... ಒಂದೇ ದಿನ ಕಚ್ಚಿಸಿಕೊಂಡವರು ಎಷ್ಟು ಗೊತ್ತಾ? - ಗಂಗಾವತಿ ನ್ಯೂಸ್,
ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಬೀದಿ ನಾಯಿಗಳು ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ.

Dog attack woman Injured Dog attack woman Injured
ಗಾಯಾಳು ಕೂಲಿ ಕಾರ್ಮಿಕ ಮಹಿಳೆ ರೇಣುಕಮ್ಮ ಹನುಮಂತಪ್ಪ ಎಂಬವರನ್ನು ನಗರದ ವಿಭಾಗ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಸೋಮವಾರ ಒಂದೇ ದಿನ ಗ್ರಾಮದ ಮಕ್ಕಳು, ಮಹಿಳೆಯರು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಮಂದಿಗೆ ಬೀದಿ ನಾಯಿಗಳು ಕಚ್ಚಿವೆ ಎಂದು ಪ್ರತ್ಯಕ್ಷದರ್ಶಿ ಶ್ರೀನಿವಾಸ ತಿಳಿಸಿದ್ದಾರೆ.