ಗಂಗಾವತಿ:ನವಲಿಯಲ್ಲಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ಮಾಡಲು 24 ಕೋಟಿ ರೂಪಾಯಿ ಮಂಜೂರು ಮಾಡಿ ಸರ್ಕಾರ ಆದೇಶ ಮಾಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನವಲಿ ಸಮನಾಂತರ ಜಲಾಶಯಕ್ಕೆ ಡಿಪಿಆರ್ ಸಿದ್ಧ: ಗೃಹ ಸಚಿವ ಬೊಮ್ಮಾಯಿ - ಗೃಹ ಸಚಿವ ಬಸವರಾಜ ಬೊಮ್ಮಾಯಿ
ನವಲಿಯಲ್ಲಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ಮಾಡಲು 24 ಕೋಟಿ ರೂಪಾಯಿ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
![ನವಲಿ ಸಮನಾಂತರ ಜಲಾಶಯಕ್ಕೆ ಡಿಪಿಆರ್ ಸಿದ್ಧ: ಗೃಹ ಸಚಿವ ಬೊಮ್ಮಾಯಿ basavaraja-bommai](https://etvbharatimages.akamaized.net/etvbharat/prod-images/768-512-6060483-thumbnail-3x2-sanju.jpg)
ನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು, ಶಾಸಕ ಪರಣ್ಣ ಮುನವಳ್ಳಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಂಗಭದ್ರಾ ನದಿಯಲ್ಲಿನ ಹೂಳು ನಿವಾರಣೆ ಅಸಾಧ್ಯವಾಗುತ್ತಿರುವ ಹಿನ್ನೆಲೆ ಪರ್ಯಾಯವಾಗಿ ಈ ಭಾಗದಲ್ಲಿ ನಾಲ್ಕು ಸಮತೋಲನ ಜಲಾಶಯ ನಿರ್ಮಾಣಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಮುಂದೆ ಬಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದ್ದಾರೆ.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಎಲ್ಲೆಲ್ಲಿ ಸಮನಾಂತರ ಜಲಾಶಯ ನಿರ್ಮಾಣ ಮಾಡಬೇಕು ಎಂಬುವುದರ ಬಗ್ಗೆ ಸರ್ವೇ ಮಾಡಲು ಸೂಚಿಸಲಾಗಿತ್ತು. ಈಗ ನವಲಿಯಲ್ಲಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ಮಾಡಲು ಹಣ ಮಂಜೂರು ಮಾಡಿ ಸರ್ಕಾರ ಆದೇಶ ಮಾಡಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ವಿಸ್ತೃತ ವರದಿ ಬಂದ ಬಳಿಕ ಹಾಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗಮನಕ್ಕೂ ತರಲಾಗುವುದು ಎಂದರು.