ಕೊಪ್ಪಳ :ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 63ರ ರಸ್ತೆ ಬದಿ ನಡೆಯುತ್ತಿರುವ ಚರಂಡಿ ಕಾಮಗಾರಿ ಇದೀಗ ಹಲವು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದೆ.
ಕೊಪ್ಪಳದಲ್ಲಿ ಸಾರ್ವಜನಿಕರಿಗೆ ತೀವ್ರ ತಲೆನೋವಾದ ಚರಂಡಿ ಕಾಮಗಾರಿ - koppala latest news
ನಗರದಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿ ಇದೀಗ ಹಲವು ಸಮಸ್ಯೆಗಳನ್ನು ತಂದೊಡ್ಡಿದೆ. ಚರಂಡಿಯಿಂದ ಎತ್ತಲಾದ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿಯೇ ಬಿಟ್ಟಿದ್ದು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.
ಈ ಕಾಮಗಾರಿ ಕೇಂದ್ರೀಯ ಬಸ್ ನಿಲ್ದಾಣದ ಬಳಿ ನಡೆಯುತ್ತಿದ್ದು, ಚರಂಡಿಯಿಂದ ಎತ್ತಲಾದ ಆ ತ್ಯಾಜ್ಯವನ್ನು ಬೇರೆಡೆ ಸಾಗಿಸದೆ ಅಲ್ಲಿಯೇ ಹಾಕಿದ್ದು ದುರ್ವಾಸನೆ ಬೀರುತ್ತಿದೆ.ಇದರಿಂದಾಗಿ ಕಳೆದೆರಡು ದಿನಗಳಿಂದ ಈ ಭಾಗದ ಹೋಟೆಲ್ಗಳೂ ಸಹ ಬಂದ್ ಆಗಿವೆ. ಇನ್ನೊಂದೆಡೆ ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಕಾರ್ಮಿಕರು ಚರಂಡಿಗಿಳಿದು ಕೆಲಸ ಮಾಡುತ್ತಿದ್ದಾರೆ. ಈ ಕಾಮಗಾರಿ ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ, ಕಳಪೆ ಗುಣಮಟ್ಟದಲ್ಲಿ ಕೆಲಸ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರದ್ದು.
ಹಾಗಾಗಿ, ಈ ಚರಂಡಿಯಿಂದ ತೆಗೆದ ತ್ಯಾಜ್ಯವನ್ನು ಕೂಡಲೇ ಬೇರೆಡೆಗೆ ಸಾಗಿಸುವ ಮೂಲಕ ಜನರ ಆರೋಗ್ಯವನ್ನು ರಕ್ಷಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.