ಕರ್ನಾಟಕ

karnataka

ETV Bharat / state

ಗೃಹ ಇಲಾಖೆಗೆ 7 ಸಾವಿರ ಸಿಬ್ಬಂದಿ ನೇಮಕ.. 852 ಹೊಸ ಪಿಎಸ್​ಐ ಹುದ್ದೆ ಸೃಷ್ಟಿ - gangavathi news

ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ಹೋಗಲಾಡಿಸಲು ಕಳೆದ ವರ್ಷ 7 ಸಾವಿರ ಸಿಬ್ಬಂದಿ ನೇಮಕಕ್ಕೆ ಚಾಲನೆ ನೀಡಲಾಗಿತ್ತು. ಈ ವರ್ಷವೂ ಅಷ್ಟೇ ಪ್ರಮಾಣದ ಸಿಬ್ಬಂದಿ ನೇಮಕವಾಗಲಿದ್ದಾರೆ ಎಂದು ರಜನೀಶ್ ಗೋಯೆಲ್ ತಿಳಿಸಿದರು.

drive-for-the-process-of-recruiting-7000-staff
ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ರಜನೀಶ್

By

Published : Jan 23, 2021, 10:21 PM IST

ಗಂಗಾವತಿ (ಕೊಪ್ಪಳ):ಗೃಹ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ಹೋಗಲಾಡಿಸಲು ಇದೇ ವರ್ಷದಲ್ಲಿ 7 ಸಾವಿರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯೆಲ್ ತಿಳಿಸಿದ್ದಾರೆ.

ಕಲಬುರಗಿಯ ಪ್ರಾದೇಶಿಕ ಆಯುಕ್ತರಾಗಿದ್ದ ರಜಿನೀಶ್ ಗೋಯೆಲ್, ಇದೀಗ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದು, 10 ವರ್ಷದ ಬಳಿಕ ಇದೇ ಮೊದಲ ಬಾರಿಗೆ ವೈಯಕ್ತಿಕ ಪ್ರವಾಸದ ಹಿನ್ನೆಲೆ ನಗರಕ್ಕೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ಹೋಗಲಾಡಿಸಲು ಕಳೆದ ವರ್ಷ 7 ಸಾವಿರ ಸಿಬ್ಬಂದಿ ನೇಮಕಕ್ಕೆ ಚಾಲನೆ ನೀಡಲಾಗಿತ್ತು. ಈ ವರ್ಷವೂ ಅಷ್ಟೇ ಪ್ರಮಾಣದ ಸಿಬ್ಬಂದಿ ನೇಮಕವಾಗಲಿದ್ದಾರೆ ಎಂದರು.

ಮುಂದಿನ ಮೂರು ವರ್ಷದಲ್ಲಿ ಪೊಲೀಸ್ ಇಲಾಖೆಯನ್ನು ಸದೃಢಗೊಳಿಸುವ ಯೋಜನೆ ಸರ್ಕಾರ ಹಾಕಿಕೊಂಡಿದೆ. ಇದಕ್ಕೆ ಪೂರಕವಾಗಿ ಈಗಾಗಲೇ ರಾಜ್ಯದಲ್ಲಿ 852 ಹೊಸ ಪಿಎಸ್ಐ ಹುದ್ದೆಗಳನ್ನು ಸೃಷ್ಟಿಸಲಾಗಿದೆ ಎಂದರು.

ಇದನ್ನೂ ಓದಿ:ಪ್ರಶ್ನೆ ಪತ್ರಿಕೆ ಸೋರಿಕೆ; 6 ಮಂದಿ ಬಂಧನ, ನಾಳೆ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

ABOUT THE AUTHOR

...view details