ಕೊಪ್ಪಳ/ಕುಷ್ಟಗಿ:ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಕೊರೊನಾ ಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು.
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಬೇಕಿದೆ. ಈ ಸೋಂಕು ವ್ಯಕ್ತಿಯನ್ನು ನೋಡಿ ತಗುಲುವುದಿಲ್ಲ. ಯಾರಿಗೆ ಬೇಕಾದರೂ ಸೋಂಕು ತಗುಲಬಹುದು. ಈ ಸಾಂಕ್ರಾಮಿಕ ರೋಗಕ್ಕೆ ಇನ್ನೂ ಔಷಧ ಇಲ್ಲ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಬಿ.ಎಸ್.ರೇಖಾ ಹೇಳಿದರು.