ಕೊಪ್ಪಳ: ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕಲಕಬಂಡಿ ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವು - undefined
ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಟ್ರ್ಯಾಕ್ಟರ್ ಇಂಜಿನ್ ಹಾಗೂ ಟ್ರಾಲಿ ನಡುವೆ ಚಾಲಕ ಸಿಲುಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಟ್ರ್ಯಾಕ್ಟರ್ ಪಲ್ಟಿ
ಕರಿಯಪ್ಪ ಗದ್ದಿ (40) ಮೃತಪಟ್ಟ ಟ್ರ್ಯಾಕ್ಟರ್ ಚಾಲಕ. ಟ್ರ್ಯಾಕ್ಟರ್ನಲ್ಲಿದ್ದ ಮಣ್ಣನ್ನು ಅನ್ಲೋಡ್ ಮಾಡುವಾಗ ಟ್ರ್ಯಾಕ್ಟರ್ ಇಂಜಿನ್ ಮೇಲೆದ್ದ ಪರಿಣಾಮವಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ಇಂಜಿನ್ ಹಾಗೂ ಟ್ರಾಲಿ ನಡುವೆ ಚಾಲಕ ಸಿಲುಕಿ ಸಾವನ್ನಪ್ಪಿದ್ದಾನೆ.
ಇನ್ನು ಈ ಘಟನೆ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.