ಗಂಗಾವತಿ:ಚೋಟಾ ಬಾಂಬೆ ಎಂದು ಕರೆಯಲ್ಪಡುವ ಗಂಗಾವತಿ ಸಣ್ಣ ಮಹಾನಗರ ಇದ್ದಂತೆ. ಇಲ್ಲಿ ಎಲ್ಲಾ ಚಟುವಟಿಕೆಗಳು ನಡೆಯುತ್ತವೆ. ಹಂತ-ಹಂತವಾಗಿ ಕಾನೂನು ಬಾಹೀರ ಚಟುವಟಿಕೆಗಳನ್ನು ನಿಯಂತ್ರಣಕ್ಕೆ ತರುವ ಉದ್ದೇಶ ಹಾಗೂ ಗುರಿ ಹಮ್ಮಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಹೇಳಿದ್ದಾರೆ.
ಹಂತ-ಹಂತವಾಗಿ ಕಾನೂನುಬಾಹೀರ ಚಟುವಟಿಕೆಗಳನ್ನು ನಿಯಂತ್ರಿಸಲಾಗುವುದು: ಡಿವೈಎಸ್ಪಿ ರುದ್ರೇಶ್
ಗಂಗಾವತಿ ಉಪವಿಭಾಗ ವ್ಯಾಪ್ತಿಯಲ್ಲಿ ಸಾಕಷ್ಟು ಕಾನೂನು ಬಾಹೀರ ಚಟುವಟಿಕೆ ನಡೆಯುತ್ತಿವೆ ಎಂಬ ದೂರುಗಳಿದ್ದು, ನನ್ನ ಗಮನಕ್ಕೂ ಬಂದಿದೆ. ಹೀಗಾಗಿ ಠಾಣಾವಾರು ಭೇಟಿ ನೀಡಿ, ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಹೇಳಿದ್ದಾರೆ.
ಗಂಗಾವತಿ ಉಪ ವಿಭಾಗದ ಡಿವೈಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಗಂಗಾವತಿ ಗ್ರಾಮೀಣ ವೃತ್ತದ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ ಅನುಭವವಿದೆ. ಹೀಗಾಗಿ ಉಪವಿಭಾಗದ ನಿರ್ವಹಣೆ ಸಮಸ್ಯೆ ಎನಿಸುವುದಿಲ್ಲ. ಉಪವಿಭಾಗ ವ್ಯಾಪ್ತಿಯಲ್ಲಿ ಸಾಕಷ್ಟು ಕಾನೂನು ಬಾಹೀರ ಚಟುವಟಿಕೆ ನಡೆಯುತ್ತಿವೆ ಎಂಬ ದೂರುಗಳಿದ್ದು, ನನ್ನ ಗಮನಕ್ಕೂ ಬಂದಿದೆ. ಹೀಗಾಗಿ ಠಾಣಾವಾರು ಭೇಟಿ ನೀಡಿ, ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಖ್ಯವಾಗಿ ಇಸ್ಪೀಟ್ ಜೂಜಾಟ, ಅಕ್ರಮ ಮರಳು ಸಾಗಾಣಿಕೆ, ಅರಣ್ಯ ಹಾಗೂ ಸಂರಕ್ಷಿತ ಪ್ರದೇಶದಲ್ಲಿ ಕಲ್ಲುಗಣಿಗಾರಿಗೆ ಸೇರಿದಂತೆ ನಾನಾ ದಂಧೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಸಂಬಂಧಿತ ಅಧಿಕಾರಿಗಳಿಗೆ ಈ ಬಗ್ಗೆ ನಿರ್ದೇಶನ ನೀಡಿ, ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಪ್ರಮಾಣಿಕ ಯತ್ನ ಮಾಡುತ್ತೇನೆ ಎಂದರು.