ಕೊಪ್ಪಳ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯಲಿರುವ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗಳು ನಾಳೆಯಿಂದ, ಅಂದರೆ ಮಾರ್ಚ್ 28ರಿಂದ ಪ್ರಾರಂಭಗೊಳ್ಳಲಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗಳು ಮಾರ್ಚ್ 28ರಿಂದ ಪ್ರಾರಂಭಗೊಳ್ಳಲಿದ್ದು, ಮಾ. 28ರಂದು ಬೆಳಗ್ಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಳೆಯಿಂದ ಅಂದರೆ ಮಾರ್ಚ್ 28 ರಿಂದ ಏಪ್ರಿಲ್ 4 ರವರೆಗೆ ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ, ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.