ಕೊಪ್ಪಳ/ಗಂಗಾವತಿ: ಕೊರೊನಾ ಸಂದರ್ಭದಲ್ಲಿ ಸರ್ಕಾರದ ಲಾಕ್ಡೌನ್ ಆದೇಶ ಉಲ್ಲಂಘಿಸಿ ಜನ ಜಾತ್ರೆಯಂತೆ ನೆರೆಯುತ್ತಿರುವ ವಿದ್ಯಮಾನದ ಬಗ್ಗೆ ಈಟಿವಿ ಭಾರತ್ ವಿಸ್ತೃತ ವರದಿ ಪ್ರಕಟಿಸಿತ್ತು. ಈ ವರದಿ ಬಳಿಕ ಇದೀಗ ಅಲರ್ಟ್ ಆಗಿರುವ ಜಿಲ್ಲಾಡಳಿತ ಮಾರುಕಟ್ಟೆಯನ್ನು ವಿಭಜಿಸಲು ಮುಂದಾಗಿದೆ.
ವರದಿಯನ್ನು ಖುದ್ದು ವೀಕ್ಷಿಸಿದ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್, ಸಹಾಯುಕ ಆಯುಕ್ತೆ ಸಿ.ಡಿ. ಗೀತಾ ಅವರನ್ನು ಸ್ಥಳಕ್ಕೆ ಕಳುಹಿಸಿ ವರದಿ ಪಡೆದುಕೊಂಡಿದ್ದಾರೆ.
ಮಧ್ಯರಾತ್ರಿ ನೂರಾರು ವರ್ತಕರು ಸೇರಿ ವಹಿವಾಟು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಗಂಗಾವತಿಯಲ್ಲಿನ ತರಕಾರಿ, ಹಣ್ಣಿನ ಮಾರುಕಟ್ಟೆಯನ್ನು ವಿಭಜಿಸಿ ಎಪಿಎಂಸಿ, ತಾಲೂಕು ಕ್ರೀಡಾಂಗಣಕ್ಕೆ ಸ್ಥಳಾಂತರಿಸುವುದರ ಜೊತೆಗೆ ಸಗಟು ಮಾರುಕಟ್ಟೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ನೀಡಿದ್ದಾರೆ.
ಈಟಿವಿ ಭಾರತ ವರದಿಗೆ ಸ್ಪಂದಿಸಿ ಜನರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಮಾರುಕಟ್ಟೆ ವಿಭಜಿಸಲು ಮುಂದಾಗಿರುವುದು ಉತ್ತಮ ಬೆಳವಣಿಗೆ. ಸಕಾಲಕ್ಕೆ ಸೂಕ್ತ ಕ್ರಮ ಕೈಗೊಂಡಿರುವ ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರಿಗೆ ಧನ್ಯವಾದ ತಿಳಿಸುತ್ತೇವೆ.