ಕೊಪ್ಪಳ: ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಮನನೊಂದ ರೈತನೋರ್ವ ಫಸಲಿದ್ದ ತನ್ನ ಎರಡೂವರೆ ಎಕರೆ ಬಾಳೆ ಬೆಳೆಯನ್ನು ಟ್ರ್ಯಾಕ್ಟರ್ ಹತ್ತಿಸಿ ನಾಶ ಮಾಡಿದ್ದಾರೆ.
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ರೈತ ಗವಿಸಿದ್ದಪ್ಪ ಗದ್ದಿಕೇರಿ, ಎರಡು ಎಕರೆ ಪ್ರದೇಶದಲ್ಲಿದ್ದ ಬಾಳೆ ಬೆಳೆದಿದ್ದರು. ಕಳೆದ ವರ್ಷ ಕೊರೊನಾ ಸೋಂಕಿನಿಂದಾಗಿ ಉಂಟಾದ ಲಾಕ್‍ಡೌನ್‍ನಿಂದಾಗಿ ಬಾಳೆಗೆ ಉತ್ತಮ ಬೆಲೆ ಸಿಗಲಿಲ್ಲ. ಈ ಬಾರಿಯಾದರೂ ಉತ್ತಮ ಬೆಲೆ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದರು. ಆದ್ರೆ ಈ ನಿರೀಕ್ಷೆಯೂ ಹುಸಿಯಾಗಿದೆ. ಖರೀದಿದಾರರು ಒಂದು ಕೆ.ಜಿಗೆ 2 ರಿಂದ 3 ರೂಪಾಯಿಗೆ ಕೇಳುತ್ತಿದ್ದಾರೆ. ಇದರಿಂದಾಗಿ ಬಾಳೆ ಬೆಳೆಯಲು ಹಾಕಿದ ಬಂಡವಾಳವೂ ಸಹ ಬರುತ್ತಿಲ್ಲ. ಹೀಗಾಗಿ, ಬೆಳೆ ನಾಶಪಡಿಸುತ್ತಿರುವುದಾಗಿ ಅವರು ಹೇಳಿದ್ದಾರೆ.