ಗಂಗಾವತಿ(ಕೊಪ್ಪಳ):ತಾಲೂಕಿನಲ್ಲಿ ಭಾನುವಾರ ಸಂಜೆ ಭಾರಿ ಗಾಳಿ, ಮಳೆಯ ಪರಿಣಾಮ ಕೃಷಿ ಕಾರ್ಯದಲ್ಲಿ ತೊಡಗಿದ್ದ ರೈತನೊಬ್ಬ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ತಾಲೂಕಿನ ಇಂದರಗಿಯಲ್ಲಿ ನಡೆದಿದೆ. ಮೃತ ರೈತನನ್ನು ಶಿವಪ್ಪ ಕಾಸನಕಿಂಡಿ (76) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಮೃತ ರೈತನ ಕುಟುಂಬಕ್ಕೆ ತಕ್ಷಣ ಐದು ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ನ್ನು ಕಂದಾಯ ಇಲಾಖೆಯ ಮೂಲಕ ಕೊಡಿಸುವ ವ್ಯವಸ್ಥೆ ಮಾಡಿದ್ದಾರೆ. ಬಳಿಕ ಹತ್ತು ಸಾವಿರ ರೂಪಾಯಿ ವೈಯಕ್ತಿಕ ಪರಿಹಾರವನ್ನೂ ಸಹ ಶಾಸಕರು ನೀಡಿದ್ದಾರೆ.