ಕೊಪ್ಪಳ: ಜಿಲ್ಲೆಯಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವರಣವಿದ್ದು, ಹುಳಿಗಡಲೆ ಬೆಳೆಗೆ ಹಾನಿಯಾಗುವ ಆತಂಕ ಎದುರಾಗಿದೆ.
ಮೋಡಕವಿದ ವಾತಾವರಣ: ಹುಳಿಗಡಲೆ ಬೆಳೆದ ರೈತರಲ್ಲಿ ಆತಂಕ! - Koppal Latest News
ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹುಳಿಗಡಲೆ ಬೆಳೆಯಲಾಗಿದೆ. ಇಂತಹ ಸಂದರ್ಭದಲ್ಲಿ ಮೋಡ ಕವಿದ ವಾತಾವರಣ ಹಾಗೂ ಜಿಟಿಜಿಟಿ ಮಳೆಯಾಗುತ್ತಿರೋದು ರೈತರ ಆತಂಕಕ್ಕೆ ಕಾರಣವಾಗಿದೆ.
ಮೋಡಕವಿದ ವಾತಾವರಣ: ಹುಳಿಗಡಲೆ ಬೆಳೆದ ರೈತರಲ್ಲಿ ಆತಂಕ
ಜಿಲ್ಲೆಯಲ್ಲಿ ಸುಮಾರು 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹುಳಿಗಡಲೆ ಬೆಳೆಯಲಾಗಿದೆ. ಈಗ ಹೂವು, ಕಾಯಿ ಕಟ್ಟುವ ಸಮಯ. ಇಂತಹ ಸಂದರ್ಭದಲ್ಲಿ ಮೋಡ ಕವಿದ ವಾತಾವರಣ ಹಾಗೂ ಜಿಟಿಜಿಟಿ ಮಳೆಯಾಗುತ್ತಿರೋದು ರೈತರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಈ ವಾತಾವರಣದಿಂದ ಕೀಟಬಾಧೆ ಹೆಚ್ಚಾಗುತ್ತದೆ.
ಈ ಹಿಂದೆ ಸುರಿದ ಮಳೆಯಿಂದಾಗಿ ಮೆಣಸಿಕಾಯಿ ಹಾಗೂ ಇತರೆ ಬೆಳೆ ಹಾನಿಗೊಳಗಾಗಿ ನಷ್ಟ ಅನುಭವಿಸಿದ್ದೆವು. ಈಗ ಅಕಾಲಿಕ ಮಳೆ ಹಾಗೂ ಮೋಡ ಕವಿದ ವಾತಾವರಣವಿದ್ದು, ಹುಳಿಗಡಲೆ ಬೆಳೆ ನಾಶವಾಗುವ ಆತಂಕದಲ್ಲಿದ್ದೇವೆ ಎನ್ನುತ್ತಿದ್ದಾರೆ ರೈತರು.