ಕೊಪ್ಪಳ:ಚೆಕ್ ಡ್ಯಾಂ ನಿರ್ಮಾಣದಲ್ಲಿ ಕೋಟ್ಯಂತರ ರೂ. ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಸಾಬೀತಾದ ಹಿನ್ನೆಲೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕುಷ್ಟಗಿ ಉಪವಿಭಾಗದ 7 ಎಂಜಿನಿಯರ್ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸರ್ಕಾರದ ಸೂಚನೆಯಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ರಘುನಂದನಮೂರ್ತಿ ಅವರು ಸಲ್ಲಿಸಿದ ದೂರಿನ ಹಿನ್ನೆಲೆ, ಕೊಪ್ಪಳದ ಸೈಬರ್, ಆರ್ಥಿಕ ಮತ್ತು ಮಾದಕದ್ರವ್ಯ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
ಕಿರಿಯ ಇಂಜಿನಿಯರ್ಗಳಾದ ಎಂ.ಇಲಿಯಾಸ್, ಕವಿತಾ, ರಿಜ್ವಾನ್, ಅಶ್ವಿನಿ, ಸಹಾಯಕ ಇಂಜಿನಿಯರ್ ಅಜಿತ್ ದಳವಾಯಿ ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಡಿ.ನಾಗೋಡ, ಶಂಕರ್ ಮಾಳಗಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
2019-20ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಲ್ಲಿ 21 ಸರಣಿ ಚೆಕ್ ಡ್ಯಾಂಗಳ ನಿರ್ಮಾಣಕ್ಕೆ 44.71 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಈ ಬಗ್ಗೆ ಸರ್ಕಾರ ತನಿಖೆ ನಡೆಸಿದಾಗ 16.77 ಲಕ್ಷ ರೂಪಾಯಿ ಕಾಮಗಾರಿ ನಡೆದಿದ್ದು, 27.94 ಲಕ್ಷ ರೂ. ದುರ್ಬಳಕೆಯಾಗಿದೆ ಎಂಬುದು ದೃಢಪಟ್ಟಿದೆ.
ಓದಿ:ನಾಲ್ವರು ಅಸಮಾಧಾನಿತ ಸಚಿವರಿಗೆ ಖಾತೆಗಳ ಮರು ಹಂಚಿಕೆ?
ಇನ್ನು, ಮತ್ತೊಂದು ಕುಷ್ಟಗಿ ಉಪವಿಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಚೆಕ್ ಡ್ಯಾಂಗಳ ನಿರ್ಮಾಣದ 198 ಕಾಮಗಾರಿಗಳಲ್ಲಿ 2.70 ಕೋಟಿ ರೂ. ದುರ್ಬಳಕೆಯಾಗಿರುವ ಕುರಿತಂತೆ ಸರ್ಕಾರ ನಡೆಸಿದ ತನಿಖೆಯಲ್ಲಿ ಸಾಬೀತಾಗಿದೆ. ಈ ಎರಡೂ ಅಕ್ರಮಗಳ ಹಿನ್ನಲೆಯಲ್ಲಿ ಏಳು ಜನ ಇಂಜಿನಿಯರ್ಗಳ ವಿರುದ್ಧ ಕಲಂ 409 ಹಾಗೂ ಕಲಂ 420ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.