ಕೊಪ್ಪಳ:ಗುಡಿಸಲಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಕೊಪ್ಪಳದಲ್ಲಿ ನಡೆದಿದ್ದು, ಅದೃಷ್ಟವಶಾತ್ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ರೇಣಮ್ಮ ಎಂಬುವರ ಗುಡಿಸಲು ಸುಟ್ಟು ಭಸ್ಮವಾಗಿದೆ. ಗುಡಿಸಲಿನಲ್ಲಿದ್ದ ಕುರಿಮರಿಯೊಂದಿಗೆ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಮಂಡ್ಯ : ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರದ್ದು ಎನ್ನಲಾದ ಆಡಿಯೋ ವೈರಲ್!
ಮನೆಯಲ್ಲಿ ಅಡುಗೆ ಸಿಲಿಂಡರ್ ಇದ್ದ ಕಾರಣ ಬೆಂಕಿ ನಂದಿಸಲು ಸ್ಥಳೀಯರು ಹಿಂದೇಟು ಹಾಕಿದ್ದರಿಂದ, ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಲ್ಲದೇ ಗುಡಿಸಲಿನಲ್ಲಿದ್ದ ಆಹಾರ ಧಾನ್ಯ ಸೇರಿ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ