ಕೊಪ್ಪಳ: ಜೆ.ಪಿ.ನಾರಾಯಣಸ್ವಾಮಿ ಪ್ರತಿಷ್ಠಾನದ ಪ್ರಥಮ ವಾರ್ಷಿಕೋತ್ಸವ ಫೆ. 2 ರಂದು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರಿನಲ್ಲಿರುವ ಆರ್ಯ ಈಡಿಗ ಮಹಾಸಂಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಜಿಲ್ಲಾ ಮುಖ್ಯ ಸಂಚಾಲಕ ರಾಘವೇಂದ್ರ ಹುಯಿಲಗೋಳ ಹೇಳಿದರು.
ನಗರದ ಮೀಡಿಯಾ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆ.ಪಿ. ನಾರಾಯಣಸ್ವಾಮಿ ಅವರು ಆರ್ಯ ಈಡಿಗ ಸಮಾಜದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದವರು. ಅವರು ಅಕಾಲಿಕವಾಗಿ ನಿಧನ ಹೊಂದಿದ ಬಳಿಕ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಲಾಗಿದೆ. ಪ್ರತಿಷ್ಠಾನದ ಮೊದಲ ವಾರ್ಷಿಕೋತ್ಸವ ಫೆ. 2 ರಂದು ನಡೆಯಲಿದ್ದು, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಉದ್ಘಾಟಿಸುವರು.