ಕರ್ನಾಟಕ

karnataka

ETV Bharat / state

ವಿರುಪಾಪುರಗಡ್ಡೆಯಲ್ಲಿ ಕೊಚ್ಚಿ ಹೋಗಿದ್ದ ಐವರು ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣೆ! - ಎನ್​ಡಿಆರ್​ಎಫ್​ ಸಿಬ್ಬಂದಿ,

ಪ್ರವಾಹ ಪೀಡಿತರ ರಕ್ಷಣೆಗಾಗಿ ಬಂದಿದ್ದ ಇಬ್ಬರು ಎನ್​ಡಿಆರ್​ಎಫ್​ ಸಿಬ್ಬಂದಿ ಹಾಗೂ ಮೂವರು ಅಗ್ನಿಶಾಮಕ ಸಿಬ್ಬಂದಿ ತುಂಗಭದ್ರಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿತ್ತು. ಈ ಮಧ್ಯೆ ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಎಲ್ಲ ಸಿಬ್ಬಂದಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

Koppal district

By

Published : Aug 12, 2019, 1:22 PM IST

Updated : Aug 12, 2019, 3:31 PM IST

ಕೊಪ್ಪಳ :ಪ್ರವಾಹ ಪೀಡಿತರ ರಕ್ಷಣೆಗಾಗಿ ಬಂದಿದ್ದ ಇಬ್ಬರು ಎನ್​ಡಿಆರ್​ಎಫ್​ ಸಿಬ್ಬಂದಿ ಹಾಗೂ ಮೂವರು ಅಗ್ನಿಶಾಮಕ ಸಿಬ್ಬಂದಿ ತುಂಗಭದ್ರಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಐವರು ಸಿಬ್ಬಂದಿಗಳನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ.

ಪ್ರವಾಹದಲ್ಲಿ ಕೊಚ್ಚಿ ಹೋದ ಸಿಬ್ಬಂದಿಯ ರಕ್ಷಣೆ ಮಾಡಲಾಗಿದೆ.

ವಿರುಪಾಪುರಗಡ್ಡೆಯಲ್ಲಿ ಪ್ರವಾಹ ಭೀತಿ ಎದುರಿಸುತ್ತಿದ್ದ ಪ್ರವಾಸಿಗರು ಹಾಗೂ ಸ್ಥಳೀಯ ಜನರನ್ನು ರಕ್ಷಿಸಲು ಈ ಸಿಬ್ಬಂದಿ ಬಂದಿದ್ದರು. ಜನರನ್ನು ರಕ್ಷಿಸಿ ಕರೆ ತರುಲು ವಿರುಪಾಪುರಗಡ್ಡೆ ಕಡೆಗೆ ಬೋಟ್ ಸಾಗುತ್ತಿದ್ದಾಗ ಬೋಟ್ ಮಗುಚಿ ಬಿದ್ದಿದೆ. ಪರಿಣಾಮ ನೀರಿನ ಸೆಳೆತಕ್ಕೆ ಇಬ್ಬರು ಎನ್​ಡಿಆರ್​ಎಫ್​ ಸಿಬ್ಬಂದಿ ಹಾಗೂ ಗಂಗಾವತಿಯ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಕೊಚ್ಚಿ ಹೋಗಿದ್ದಾರೆ. ವಿಷಯ ತಿಳಿದ ಕೂಡಲೇ ಕಾರ್ಯಚರಣೆಗೆ ಧುಮುಕಿದ ಇತರೆ ಸಿಬ್ಬಂದಿಗಳು ಕೊಚ್ಚಿ ಹೋಗಿದ್ದ ಐವರನ್ನು ರಕ್ಷಣೆ ಮಾಡುವಲ್ಲಿ ಯಶ್ವಸಿಯಾಗಿದ್ದಾರೆ.

ನೀರಿನಲ್ಲಿ ಕೊಚ್ಚಿ ಹೋಗಿರುವ ಸಿಬ್ಬಂದಿಗಾಗಿ ಹುಟುಕಾಟ ನಡೆದಿದೆ. ತುಂಗಭದ್ರಾ ನದಿಯಲ್ಲಿ ಈಗ ನೀರು ರಭಸವಾಗಿ ಹರಿಯುತ್ತಿದ್ದು, ಈ ಅವಘಡಕ್ಕೆ ಕಾರಣ ಎಂದು ಹೇಳಲಾಗ್ತಿದೆ.

Last Updated : Aug 12, 2019, 3:31 PM IST

ABOUT THE AUTHOR

...view details