ಕೊಪ್ಪಳ: ಬೆಳ್ಳಂಬೆಳಗ್ಗೆ ಧ್ವಜದ ಕಂಬ ತೆರವುಗೊಳಿಸಲು ಹೋಗಿದ್ದ ಐವರು ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಗರದ ಬನ್ನಿಕಟ್ಟಿ ಪ್ರದೇಶದಲ್ಲಿರುವ ಡಿ.ದೇವರಾಜು ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಈ ದಾರುಣ ಘಟನೆ ಸಂಭವಿಸಿದೆ.

ವಸತಿ ನಿಲಯದ 10ನೇ ತರಗತಿ ವಿದ್ಯಾರ್ಥಿಗಳಾದ ಮೆತಗಲ್ ಗ್ರಾಮದ ಮಲ್ಲಿಕಾರ್ಜುನ, ಲಿಂಗದಳ್ಳಿ ಗ್ರಾಮದ ಬಸವರಾಜ, 9ನೇ ತರಗತಿ ವಿದ್ಯಾರ್ಥಿಗಳಾದ ಹಲಗೇರಿ ಗ್ರಾಮದ ದೇವರಾಜ, ಹೈದರ್ ನಗರದ ಕುಮಾರ ಹಾಗೂ 8ನೇ ತರಗತಿ ವಿದ್ಯಾರ್ಥಿ ಲಾಚನಕೇರಿ ಗ್ರಾಮದ ಗಣೇಶ ಮೃತಪಟ್ಟವರು ಎಂದು ತಿಳಿದು ಬಂದಿದೆ.
ವಿದ್ಯುತ್ ಸ್ಪರ್ಶಿಸಿ ಕ್ಷಣ ಮಾತ್ರದಲ್ಲಿ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಷಾದ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.