ಗಂಗಾವತಿ:ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಮತ್ತೆ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಹಾವಳಿ ಆರಂಭವಾಗಿದೆ. ಇದು ಸಾರ್ವಜನಿಕರು, ನಾನಾ ವಲಯದ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ನಗರಸಭೆಯಿಂದ ಯಾವುದೇ ಅಧಿಕೃತ ಪರವಾನಿಗೆ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ಅಳವಡಿಸಲಾಗುತ್ತಿದೆ. ಇದನ್ನು ಕಂಡರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಹೀಗಾಗಿ ಮಾಸಿಕ ಲಕ್ಷಾಂತರ ರೂಪಾಯಿ ಆದಾಯ ನಗರಸಭೆಯ ಕೈ ತಪ್ಪುತ್ತಿದೆ. ಫ್ಲೆಕ್ಸ್ ಮತ್ತು ಬ್ಯಾನರ್ ಬ್ಯಾನ್ ಮಾಡಿ ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರೂ ಕೂಡ ನಗರದಲ್ಲಿ ಮಾತ್ರ ಕಾನೂನು ಪಾಲನೆಯಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.