ಕೊಪ್ಪಳ: ಕೆಲವು ದಿನಗಳಿಂದ ಜಿಲ್ಲೆಯ ಆನೆಗುಂದಿ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯಇಲಾಖೆ ಇರಿಸಿದ್ದ ಬೋನಿಗೆ ಬಿದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕೊಪ್ಪಳ: ಆತಂಕ ಸೃಷ್ಟಿಸಿದ್ದ ಚಿರತೆ ಬೋನಿಗೆ
ಹಲವು ದಿನಗಳಿಂದ ಜಿಲ್ಲೆಯ ಆನೆಗುಂದಿ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯಇಲಾಖೆ ಇರಿಸಿದ್ದ ಬೋನಿಗೆ ಬಿದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕೊಪ್ಪಳ
ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಕಳೆದ ಎರಡು ಮೂರು ತಿಂಗಳಿಂದ ಚಿರತೆಯೊಂದು ಕಾಣಿಸಿಕೊಂಡಿತ್ತು. ಕುರಿ, ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕಿತ್ತು.ಇದರಿಂದ ಜನರಲ್ಲಿ ಆತಂಕ ಮನೆ ಮಾಡಿತ್ತು. ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹಿಸಿದ್ದರು.
ಕಾರ್ಯಚರಣೆಗಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಆನೆಗುಂದಿ ಹೊರವಲಯದಲ್ಲಿ ಬೋನು ಇರಿದ್ದರು. ಇಂದು ಬೋನಿಗೆ7 ವರ್ಷದ ಗಂಡು ಚಿರತೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.