ಕರ್ನಾಟಕ

karnataka

ETV Bharat / state

ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ - ವಿರುಪಾಕ್ಷಪ್ಪ ಅಗಡಿ ಸಾವು

ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ಅವರು ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ.

ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ
ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ

By

Published : Oct 12, 2021, 9:45 AM IST

ಕೊಪ್ಪಳ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ (81) ಇಂದು ನಿಧನರಾಗಿದ್ದಾರೆ.

ಕಲ್ಯಾಣನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 4 ಗಂಟೆಗೆ ಕೊಪ್ಪಳದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

1985-1989 ರವರೆಗೆ ಜನತಾ ಪಕ್ಷದಿಂದ ಶಾಸಕರಾಗಿದ್ದ ವಿರುಪಾಕ್ಷಪ್ಪ ಅಗಡಿ ಅವರು ಎಸ್.ಆರ್. ಬೊಮ್ಮಾಯಿ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು. ಕೇವಲ ಒಂದು ವಾರ ಸಚಿವರಾಗಿದ್ದ ಅಗಡಿ, 1989 ರಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು‌. 1998ರಲ್ಲಿ ಲೋಕಶಕ್ತಿ ಪಕ್ಷದಿಂದ, 2004 ರಲ್ಲಿ ಜೆಡಿಎಸ್​​ನಿಂದ ಲೋಕಸಭೆಗೆ ಸ್ಪರ್ಧಿಸಿದ್ದರು.

ABOUT THE AUTHOR

...view details