ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ: 101ಕ್ಕೆ ಏರಿದ ಸೋಂಕಿತರ ಸಂಖ್ಯೆ - Four corona case found koppal

ಕೊಪ್ಪಳದಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಜೊತೆಗೆ 23 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ .

Koppal
Koppal

By

Published : Jul 2, 2020, 10:04 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಕೊರೊನಾ ಪಾಸಿಟವ್ ಕೇಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

ಇಂದು 38 ವರ್ಷದ ಪುರುಷ (P-16822), 9 ವರ್ಷದ ಬಾಲಕಿ (P- 16845), 28 ವರ್ಷದ ಪುರುಷ (P-16846) ಹಾಗೂ 31 ವರ್ಷದ ಮಹಿಳೆಗೆ (P-16847) ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

23 ಜನ ಸೋಂಕಿತರು ಗುಣಮುಖ:

ಇಂದು ಜಿಲ್ಲೆಯಲ್ಲಿ 23 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈವರೆಗೆ ಒಟ್ಟು 101 ಪಾಸಿಟಿವ್ ಪ್ರಕರಣಗಳಲ್ಲಿ 64 ಜನರು ಗುಣಮುಖರಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನುಳಿದಂತೆ 35 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details