ಕೊಪ್ಪಳ: ನಗರದ ಇಂದಿರಾ ಕ್ಯಾಂಟಿನ್ನಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಉಚಿತ ಉಪಹಾರ ವಿತರಣೆ ಪ್ರಾರಂಭವಾಗಿದೆ.
ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ಉಪಹಾರ ವಿತರಣೆ ಪ್ರಾರಂಭ - Indira Canteen
ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಕಠಿಣ ನಿಯಮಗಳೊಂದಿಗೆ ಲಾಕ್ಡೌನ್ ಜಾರಿಯಲ್ಲಿದ್ದು ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆ ಮಾಡುವಂತೆ ಸರ್ಕಾರ ಆದೇಶಿಸಿದೆ.
ಇಂದಿರಾ ಕ್ಯಾಂಟೀನ್
ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಕಠಿಣ ನಿಯಮಗಳೊಂದಿಗೆ ಲಾಕ್ಡೌನ್ ಜಾರಿಯಲ್ಲಿದ್ದು ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಾರ್ಮಿಕರು, ನಿರ್ಗತಿಕರಿಗೆ ಉಚಿತ ಉಪಹಾರ, ಊಟ ವಿತರಣೆ ಮಾಡುವಂತೆ ಸರ್ಕಾರ ಆದೇಶಿಸಿದೆ.
ಕಾರ್ಮಿಕರು, ನಿರ್ಗತಿಕರು ಇಂದಿರಾ ಕ್ಯಾಂಟೀನ್ಗೆ ಬಂದು ಉಚಿತವಾಗಿ ಉಪಹಾರ ತೆಗೆದುಕೊಂಡು ಹೋದರು. ಕ್ಯಾಂಟೀನ್ನಲ್ಲಿ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತ ವಿತರಣೆಗೆ ಮಾಡುವುದಕ್ಕೆ ಸರ್ಕಾರ ಆದೇಶ ಮಾಡಿದೆ.
Last Updated : May 12, 2021, 11:30 AM IST