ಕೊಪ್ಪಳ:ಬೈಕ್ ಸ್ಕಿಡ್ ಆಗಿ ಫ್ರಾನ್ಸ್ ಪ್ರವಾಸಿಗ ಮೋನ್ಸಲರ್ (63) ಎಂಬವರು ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಬಸಾಪೂರದ ಬಳಿ ಸೋಮವಾರ ನಡೆದಿದೆ. ಐವರು ಸ್ನೇಹಿತರೊಂದಿಗೆ ಅಕ್ಟೋಬರ್ 26ರಂದು ಹಂಪಿ ನೋಡಲೆಂದು ಇವರು ಬಂದಿದ್ದರು. ಸ್ನೇಹಿತರೊಂದಿಗೆ ಹಂಪಿಯಿಂದ ಗೋವಾಕ್ಕೆ ತೆರಳುತ್ತಿದ್ದಾಗ ಬಸಾಪೂರದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ದುರ್ಘಟನೆ ಸಂಭವಿಸಿದೆ.
ಕೂಡಲೇ ಸ್ಥಳಿಯರು ಮೋನ್ಸಲರ್ ಅವರನ್ನು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ರಾಜ್ಯದ ಇತರೆ ಘಟನೆಗಳು: ಚಾಮರಾಜನಗರದಲ್ಲಿ ಸಿಡಿಲು ಬಡಿದು ಕೆಲಸಗಾರರಿಗೆ ಗಾಯ:ಗಾರೆ ಕೆಲಸ ಮಾಡಿ ಗ್ರಾಮಕ್ಕೆ ತೆರಳುತ್ತಿದ್ದಾಗ ಸಿಡಿಲು ಹೊಡೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹನೂರಿನ ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಗುರು ( 33) ಮಂಜು (33) ಗುರುಸ್ವಾಮಿ (44) ಗಾಯಾಳುಗಳಾಗಿದ್ದಾರೆ. ಚಿಂಚಳ್ಳಿ ಗ್ರಾಮದ ಜಮೀನೊಂದರಲ್ಲಿ ಕೆಲಸ ಮುಗಿಸಿ ಸೋಮವಾರ ಸಂಜೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಳೆ ಬಂದಿದೆ. ಈ ಸಂದರ್ಭದಲ್ಲಿ ಮಣಗಳ್ಳಿ ಸರ್ಕಾರಿ ಪ್ರೌಢಶಾಲೆ ಸಮೀಪದ ಮರದ ಕೆಳಗೆ ನಿಂತಿದ್ದರು.