ರಾಯಚೂರು:ವಿವಿಧ ಯೋಜನೆಗಳಡಿ ಶೇ. 5ರಷ್ಟು ಅನುದಾನ ಅಂಗವಿಕಲರ ಅಭಿವೃದ್ಧಿಗೆ ಮೀಸಲಿರಿಸಿ ಎಂದು ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅಂಗವಿಕಲರ ಅಭಿವೃದ್ಧಿಗೆ ಶೇ.5ರಷ್ಟು ಅನುದಾನ ಮೀಸಲಿರಿಸಿ: ರಾಜಶೇಖರ ಡಂಬಳ - gangavathi news
ಪ್ರತಿ ಇಲಾಖೆ ಮತ್ತು ಶಾಲಾ ಕಾಲೇಜುಗಳಲ್ಲಿ ರಾಂಪ್ ನಿರ್ಮಿಸಬೇಕು ಹಾಗೂ ಅಂಗವಿಕಲರಿಗೆ ನಿಗದಿತ ಅವಧಿಯಲ್ಲಿ ಮಾಸಾಶನ ನೀಡಬೇಕು ಎಂದು ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಅಂಗವಿಕಲರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಯೋಜನೆಗಳಡಿ ಶೇ. 5ರಷ್ಟು ಅನುದಾನ ಅಂಗವಿಕಲರ ಅಭಿವೃದ್ಧಿಗೆ ಮೀಸಲಿರಿಸಬೇಕು. ಪ್ರತಿ ಇಲಾಖೆ ಮತ್ತು ಶಾಲಾ ಕಾಲೇಜುಗಳಲ್ಲಿ ರಾಂಪ್ ನಿರ್ಮಿಸಬೇಕು ಹಾಗೂ ಅಂಗವಿಕಲರಿಗೆ ನಿಗದಿತ ಅವಧಿಯಲ್ಲಿ ಮಾಸಾಶನ ನೀಡಬೇಕು ಎಂದರು.
ಅಸ್ಕಿಹಾಳ ನಾಗರಾಜ ಮಾತನಾಡಿ, ಎಲ್ಲಾ ಕಚೇರಿಗಳಲ್ಲೂ ಅಂಗವಿಕಲರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಬೇಕು ಹಾಗೂ ಬಸ್ಗಳಲ್ಲಿ ಏರಲು ಸೂಕ್ತ ಸೌಲಭ್ಯ ಕಲ್ಪಿಸಬೇಕು. ಗ್ರಾಮ ಪಂಚಾಯತಿ, ಪುರಸಭೆ ಸೇರಿದಂತೆ ಬಹುತೇಕ ಇಲಾಖೆಗಳಲ್ಲಿ ಅಂಗವಿಕಲರ ಅನುದಾನ ದುರ್ಬಳಕೆ ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.