ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಬೆಂಬಲಿಸಿದ್ದ ಜೆಡಿಎಸ್ ಸದಸ್ಯನಿಗೆ ಗಂಗಾವತಿ ನಗರಸಭೆಯಲ್ಲಿ ಆಯಕಟ್ಟಿನ ಸ್ಥಾನ - Gangawati Municipality

ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದು ಒಂದು ತಿಂಗಳ ಬಳಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ನಗರಸಭೆಯಲ್ಲಿ ಅಧ್ಯಕ್ಷರ ಹುದ್ದೆಯಷ್ಟೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಮಹತ್ವ ಪಡೆದಿದೆ..

ಕಾಂಗ್ರೆಸ್ ಬೆಂಬಲಿಸಿದ್ದಕ್ಕೆ ಜೆಡಿಎಸ್ ಅಭ್ಯರ್ಥಿಗೆ ಆಯಾಕಟ್ಟಿನ ಮುಖ್ಯಸ್ಥಾನ
ಕಾಂಗ್ರೆಸ್ ಬೆಂಬಲಿಸಿದ್ದಕ್ಕೆ ಜೆಡಿಎಸ್ ಅಭ್ಯರ್ಥಿಗೆ ಆಯಾಕಟ್ಟಿನ ಮುಖ್ಯಸ್ಥಾನ

By

Published : Dec 4, 2020, 7:35 PM IST

ಗಂಗಾವತಿ :ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಹಾಗೂ ಸದಸ್ಯನ ಕಿಡ್ನಾಪ್ ಮೂಲಕ ರಾಜ್ಯದ ಗಮನ ಸೆಳೆದಿದ್ದ ಇಲ್ಲಿನ ನಗರಸಭೆ ಆಡಳಿತ ತನ್ನ ವಶಕ್ಕೆ ಪಡೆಯುವಲ್ಲಿ ಕಾಂಗ್ರೆಸ್ ಕೊನೆಗೂ ಯಶಸ್ವಿಯಾಗಿದೆ. ಇದಕ್ಕೆ ಕೈ ಜೋಡಿಸಿದ ಜೆಡಿಎಸ್ ಅಭ್ಯರ್ಥಿಗೆ ಆಯಕಟ್ಟಿನ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ ಪಕ್ಷ ನಗರಸಭೆಯಲ್ಲಿ ಆಡಳಿತದ ಚುಕ್ಕಾಣಿ ಹಿಡಿಲು ಜೆಡಿಎಸ್ ಸದಸ್ಯ ಬಿಚ್ಚುಗತ್ತಿ ಜಬ್ಬಾರ್ ಖಾನ್ ಬೆಂಬಲ ಘೋಷಣೆ ಮಾಡಿ ಪ್ರಧಾನ ಪಾತ್ರವಹಿಸಿದ್ದರು. ಹೀಗಾಗಿ, ಕಾಂಗ್ರೆಸ್ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಜಬ್ಬಾರ್‌ ಅವರಿ​ಗೆ ಕೊಟ್ಟಿದೆ.

ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದು ಒಂದು ತಿಂಗಳ ಬಳಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ನಗರಸಭೆಯಲ್ಲಿ ಅಧ್ಯಕ್ಷರ ಹುದ್ದೆಯಷ್ಟೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಮಹತ್ವ ಪಡೆದಿದೆ.

ABOUT THE AUTHOR

...view details