ಕರ್ನಾಟಕ

karnataka

ETV Bharat / state

ಸ್ವಪಕ್ಷೀಯರಿಂದಲೇ ಕಿರುಕುಳ ಆರೋಪ: ಗಂಗಾವತಿ ನಗರಸಭೆ ಅಧ್ಯಕ್ಷ ಸ್ಥಾನ ತೊರೆಯಲು ಮುಂದಾದ ಮಾಲಶ್ರೀ - ಗಂಗಾವತಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಆಡಳಿತದ ಅವಧಿಯುದ್ದಕ್ಕೂ ಸದಸ್ಯರು ಸಹಕಾರ ನೀಡದೇ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಗಂಗಾವತಿ ನಗರಸಭೆ ಅಧ್ಯಕ್ಷೆ ಮಾಲಶ್ರೀ ಸಂದೀಪ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಗಂಗಾವತಿ ನಗರಸಭೆ ಅಧ್ಯಕ್ಷೆ ಮಾಲಾಶ್ರೀ ಸಂದೀಪ್
ಗಂಗಾವತಿ ನಗರಸಭೆ ಅಧ್ಯಕ್ಷೆ ಮಾಲಾಶ್ರೀ ಸಂದೀಪ್

By

Published : Mar 9, 2022, 12:59 PM IST

ಗಂಗಾವತಿ(ಕೊಪ್ಪಳ): ಕಳೆದ ಒಂದುಕಾಲು ವರ್ಷದಿಂದ ಸ್ವಪಕ್ಷೀಯರೇ ಕಿರುಕುಳ ನೀಡುತ್ತಿದ್ದು, ಇದರಿಂದ ಆಡಳಿತ ನಡೆಸಲು ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿರುವ ಗಂಗಾವತಿ ನಗರಸಭೆ ಅಧ್ಯಕ್ಷೆ ಮಾಲಶ್ರೀ ಸಂದೀಪ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಕಳೆದ ಒಂದು ಕಾಲು ವರ್ಷದ ಹಿಂದೆ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರ ವಹಿಸಿಕೊಳ್ಳುವಂತೆ ಸ್ವಪಕ್ಷೀಯ ಸದಸ್ಯರು ನನಗೆ ಸಹಕಾರ ನೀಡಿದ್ದರು. ಆದರೆ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಮಾಲಾಶ್ರೀ ಸಂದೀಪ್

ಆಡಳಿತದ ಅವಧಿಯುದ್ದಕ್ಕೂ ಸದಸ್ಯರು ಸಹಕಾರ ನೀಡಿಲ್ಲ. ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಕಾರಣಕ್ಕೆ ಇದೀಗ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದಾರೆ. ಆದರೆ ಅವಿಶ್ವಾಸ ಗೊತ್ತುವಳಿ ಮಂಡನೆಗೂ ಮುನ್ನ ನಾನೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಾಲಶ್ರೀ ಕಣ್ಣೀರು ಹಾಕಿದರು.

ಇದನ್ನೂ ಓದಿ:ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ: ತಮಿಳುನಾಡು ಜಲಸಂಪನ್ಮೂಲ ಸಚಿವ

ABOUT THE AUTHOR

...view details