ಗಂಗಾವತಿ: ತಾಲೂಕಿನ ಅಂಜನಾದ್ರಿ ಬೆಟ್ಟವನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಕರವೇ ಸಂಘಟಕರು ಕಂದಾಯ ಇಲಾಖೆಯ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅಂಜನಾದ್ರಿ ಬೆಟ್ಟ ಖಾಸಗೀಕರಣಕ್ಕೆ ವಿರೋಧ: ಸರ್ಕಾರಕ್ಕೆ ಕರವೇ ಮನವಿ - ಗಂಗಾವತಿ
ಲಕ್ಷಾಂತರ ಭಕ್ತರ ಧಾರ್ಮಿಕ ನಂಬಿಕೆಯ ತಾಣವಾದ ತಾಲೂಕಿನ ಅಂಜನಾದ್ರಿ ಬೆಟ್ಟವನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಕರವೇ ಸಂಘಟಕರು ಕಂದಾಯ ಇಲಾಖೆಯ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅಂಜನಾದ್ರಿ ಖಾಸಗೀಕರಣಕ್ಕೆ ವಿರೋಧ
ಸಂಘಟನೆಯ ಕೊಪ್ಪಳ ಜಿಲ್ಲಾ ಅಧ್ಯಕ್ಷ ಪಂಪಣ್ಣ ನಾಯಕ್ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದ ಸಂಘಟಕರು, ಧಾರ್ಮಿಕ ಶ್ರದ್ಧಾಕೇಂದ್ರವನ್ನು ಖಾಸಗೀಕರಣ ಮಾಡಲು ಯತ್ನಿಸಲಾಗುತ್ತಿದೆ. ಇದಕ್ಕೆ ಆಂಧ್ರ ಮೂಲಕ ಕೆಲ ವ್ಯಕ್ತಿಗಳು ಷಡ್ಯಂತ್ರ ನಡೆಸಿದ್ದಾರೆ. ಕೂಡಲೇ ಇದನ್ನು ತಡೆಯಬೇಕು. ಇಲ್ಲವಾದಲ್ಲಿ ದೇಗುಲದಲ್ಲಿ ವ್ಯಾಪಾರ ಶುರುವಾಗಿ, ಅಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ. ಈ ಹಿಂದೆ ಖಾಸಗಿ ವ್ಯಕ್ತಿಗಳ ನಿರ್ವಹಣೆಯಲ್ಲಿದ್ದಾಗ ಸಾಕಷ್ಟು ವಿವಾದ ಎದ್ದಿದ್ದವು. ಇದೀಗ ಮತ್ತೆ ಸಮಸ್ಯೆ ಸೃಷ್ಟಿಯಾಗುತ್ತದೆ ಎಂದು ಸಂಘಟಕರು ದೂರಿದರು.