ಗಂಗಾವತಿ: ಹತ್ತನೇ ತರಗತಿಯಲ್ಲಿ ಅನುತ್ತೀರ್ಣವಾದ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದ ಮಕ್ಕಳಿಗೆ ಇಂದಿನಿಂದ ಪೂರಕ ಪರೀಕ್ಷೆ ಆರಂಭವಾಗಿದೆ.
ಗಂಗಾವತಿ: ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಆರಂಭ - SSLC Supplementary Examination
ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಇಂದಿನಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಆರಂಭವಾಗಿದೆ. ಗಂಗಾವತಿ ನಗರದ 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1304 ಮಕ್ಕಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.
ಗಂಗಾವತಿ ನಗರದ 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗಿದ್ದು, ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪರೀಕ್ಷಾ ಕೆಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಥರ್ಮಲ್ ಸ್ಕ್ಯಾನರ್ ಮೂಲಕ ದೇಹದ ಉಷ್ಣತೆ ಪರೀಕ್ಷಿಸಿ, ಸ್ಯಾನಿಟೈಸ್ ಮಾಡಿ ಪರೀಕ್ಷಾ ಕೆಂದ್ರದೊಳಗೆ ಬಿಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಇಂದು ನಡೆಯುತ್ತಿರುವ ಗಣಿತ ಪರೀಕ್ಷೆಗೆ ಒಟ್ಟು 1304 ಮಕ್ಕಳು ನೋಂದಣಿ ಮಾಡಿಸಿಕೊಂಡಿದ್ದರು.
ನಗರದಲ್ಲಿಯೇ 8 ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕನಕಗಿರಿ, ಕಾರಟಗಿ ಹಾಗೂ ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸಿ ಪರೀಕ್ಷೆ ಬರೆಯಬೇಕಾದ ಅನಿವಾರ್ಯತೆ ಇದೆ.