ಗಂಗಾವತಿ : ಶಿಕ್ಷಕರ ದಿನಾಚರಣೆ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡುವ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕೊಪ್ಪಳದಲ್ಲಿ ಸೋಮವಾರ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಗಂಗಾವತಿ : ಮೂವರು ಶಿಕ್ಷಕರಿಗೆ ಜಿಲ್ಲಾ ಪ್ರಶಸ್ತಿಯ ಗರಿ - ಗಂಗಾವತಿ ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಸಾರ್ವಜನಿಕ ಶಿಕ್ಷಣ ಇಲಾಖೆ ನೀಡುವ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗಂಗಾವತಿ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕೊಪ್ಪಳದಲ್ಲಿ ಸೋಮವಾರ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
![ಗಂಗಾವತಿ : ಮೂವರು ಶಿಕ್ಷಕರಿಗೆ ಜಿಲ್ಲಾ ಪ್ರಶಸ್ತಿಯ ಗರಿ Gangavathi there teachers selected for district level Best Teacher Award](https://etvbharatimages.akamaized.net/etvbharat/prod-images/768-512-8704803-thumbnail-3x2-dkddk.jpg)
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಹಿರಿಯ ಪ್ರಾಥಮಿಕ ಶಾಲೆಗಳ ವಿಭಾಗದಲ್ಲಿ ಭಟ್ಟರನರಸಾಪುರದ ಜಿ.ಎಸ್. ಸುರೇಶ, ಪ್ರೌಢ ಶಾಲೆ ವಿಭಾಗದಲ್ಲಿ ಬಡವಪಟ್ಟಣದ ಶಿವಾನಂದ ತಿಮ್ಮಾಪುರ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ಕುಂಟೋಜಿ, ಲಕ್ಷ್ಮಿಕ್ಯಾಂಪಿನ ಶಾಲೆಯ ಶಿಕ್ಷಕ ಸೋಮು ಕುದರಿಹಾಳ ಆಯ್ಕೆಯಾಗಿದ್ದಾರೆ.
ಸಂಪ್ರೀತಿ ಕಲಾತಂಡ ಎಂದು ಸಮಾನ ಮನಸ್ಕ ಶಿಕ್ಷಕರ ಬಳಗ ಕಟ್ಟಿಕೊಂಡ ಸೋಮು ಮತ್ತು ಸುರೇಶ ತಾಲೂಕಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.