ಗಂಗಾವತಿ:ಕೊರೊನಾ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ವಿಳಂಬವಾಗುತ್ತಿದ್ದು, ಇದು ಶಿಕ್ಷಕರ ಸೃಜನಶೀಲತೆ ಹಾಗೂ ಮಕ್ಕಳ ಕಲಿಕೆಗೆ ಹಿನ್ನಡೆ ಆಗಬಾರದೆಂಬ ಕಾರಣಕ್ಕೆ ತಾಲೂಕು ಶಿಕ್ಷಣ ಇಲಾಖೆ ಇದೀಗ ವಿನೂತನ ಕಾರ್ಯಕ್ರಮಕ್ಕೆ ಮುಂದಾಗಿದೆ.
ವಠಾರ ಕಲಿಕೆಗೆ ಒತ್ತು: ಮಕ್ಕಳ ಮನೆ ಬಾಗಿಲಿಗೆ ಪಾಠ ಶಾಲೆ - Ganagavati latest news
ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಾಕಷ್ಟು ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಶಿಕ್ಷಣ ಇಲಾಖೆ ನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ.
Gangavati
ವಠಾರ ಶಾಲೆ ಎಂಬ ಕಲ್ಪನೆಯಡಿ ಮಕ್ಕಳ ಮನೆ ಬಾಗಿಲಿಗೆ ಶಿಕ್ಷಣ ತಲುಪಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಕನಕಗಿರಿ ತಾಲೂಕಿನ ಸುಳೇಕಲ್ ಗ್ರಾಮದಲ್ಲಿ ಈ ಕಾರ್ಯಕ್ರಮಕ್ಕೆ ಶಿಕ್ಷಣಾಧಿಕಾರಿ ಸೋಮಶೇಖರ್ ಗೌಡ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಈ ಯೋಜನೆಯಡಿ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನದಂತಹ ಕ್ಲಿಷ್ಟ ವಿಷಯಗಳ ಬಗ್ಗೆ ಹೆಚ್ಚಿನ ಆದ್ಯತೆ ಕೊಟ್ಟು ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಲಾಗುವುದು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನೂ ಒಂದೂವರೆಯಿಂದ ಎರಡು ತಿಂಗಳ ಹಿಡಿಯಬಹುದು ಎಂದರು.