ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರದ 'ಕಾಯಕಲ್ಪ ಪ್ರಶಸ್ತಿ' ಪಡೆದ ಗಂಗಾವತಿ ಉಪವಿಭಾಗ ಆಸ್ಪತ್ರೆ - ದ್ಯಾಧಿಕಾರಿ ಈಶ್ವರ ಸವುಡಿ

ಕೊಪ್ಪಳ ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆ ಪ್ರಸಕ್ತ 2018-19ನೇ ಸಾಲಿನ ಕೇಂದ್ರ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿ ಪತ್ರದೊಂದಿಗೆ 15 ಲಕ್ಷ ರೂಪಾಯಿ ನಗದು ಮೊತ್ತದ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪಡೆದ ಗಂಗಾವತಿ ಉಪವಿಭಾಗ ಆಸ್ಪತ್ರೆ

By

Published : Oct 11, 2019, 8:35 PM IST

ಕೊಪ್ಪಳ: ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆ ಪ್ರಸಕ್ತ ಸಾಲಿನ 2018-19ನೇ ಸಾಲಿನ ಕೇಂದ್ರ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿಯೊಂದಿಗೆ 15 ಲಕ್ಷ ರೂಪಾಯಿ ನಗದು ಮೊತ್ತದ ಪುರಸ್ಕಾರ ನೀಡಿ ಗೌರವಿಸಲಾಯಿತು.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಕೇಂದ್ರ ಸಚಿವ ಹರ್ಷವರ್ದನ, ಗಂಗಾವತಿಯ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಈಶ್ವರ ಸವುಡಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ಪ್ರಶಸ್ತಿಯೊಂದಿಗೆ 15 ಲಕ್ಷ ರೂಪಾಯಿ ನಗದು ನೀಡಲಾಗಿದ್ದು, ಈ ಪೈಕಿ ಶೇ.75 ರಷ್ಟು ಆಸ್ಪತ್ರೆಯ ಗುಣಮಟ್ಟ ಸುಧಾರಣೆ ಮತ್ತು ಶೇ.25 ರಷ್ಟು ಸಿಬ್ಬಂದಿಗೆ ಪ್ರೋತ್ಸಾಹ ರೂಪದಲ್ಲಿ ನಗದು ಹಣ ನೀಡಲು ಅವಕಾಶವಿದೆ.

ABOUT THE AUTHOR

...view details