ಗಂಗಾವತಿ:ಸರ್ಕಾರಿ ಉಪ ವಿಭಾಗದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ದಿಢೀರ್ ಬೆಂಕಿ ಹೊತ್ತಿಕೊಂಡು ಜನರೇಟರ್ ಭಸ್ಮವಾಗಿದೆ. ಈ ಬಗ್ಗೆ ಸ್ಪಂದಿಸಿದ ಶಾಸಕ ಪರಣ್ಣ ಮುನವಳ್ಳಿ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿನ ಜನರೇಟರ್ ಭಸ್ಮ: 10 ದಿನದಲ್ಲಿ 45 ಲಕ್ಷ ರೂ. ಅನುದಾನದ ಭರವಸೆ - latest koppala news
ಸರ್ಕಾರಿ ಉಪ ವಿಭಾಗದ ಆಸ್ಪತ್ರೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಜನರೇಟರ್ ಭಸ್ಮ ಆಗಿದೆ. ಆರೋಗ್ಯ ಇಲಾಖೆಯಿಂದ ಹತ್ತು ದಿನದಲ್ಲಿ 45 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಸಕ ಮುನವಳ್ಳಿ ತಿಳಿಸಿದರು.
ಜನರೇಟರ್ ಭಸ್ಮ: ಹತ್ತು ದಿನದಲ್ಲಿ ಪರಿಹಾರ ಒದಗಿಸುವುದಾಗಿ ಆರೋಗ್ಯ ಸಚಿವರಿಂದ ಭರವಸೆ
ಘಟನೆಯ ಬಗ್ಗೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಈಶ್ವರ ಸವುಡಿ ಅವರಿಂದ ಮಾಹಿತಿ ಪಡೆದುಕೊಂಡ ಶಾಸಕ, ನೇರವಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆಯಿಂದ ಸಾರ್ವಜನಿಕರಿಗೆ ಆಗಿರುವ ಸಮಸ್ಯೆಯ ಬಗ್ಗೆ ವಿವರಣೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆರೋಗ್ಯ ಇಲಾಖೆಯಿಂದ ಕೇವಲ ಹತ್ತು ದಿನದಲ್ಲಿ 45 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿಸುವುದಾಗಿ ಸಚಿವರು ಭರವಸೆ ನೀಡಿದ್ದು, ಹೊಸ ಸಲಕರಣೆ ಖರೀದಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದೆಂದು ಭರವಸೆ ನೀಡಿದರು.