ಗಂಗಾವತಿ:ಇಡೀ ದೇಶಕ್ಕೆ ಆ.14ರ ಮಧ್ಯೆ ರಾತ್ರಿ ಸ್ವಾತಂತ್ರ್ಯ ಸಿಕ್ಕರೆ, ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಿಗೆ ಸೆ. 17ರಂದು ಮುಕ್ತಿ ಸಿಕ್ಕಿದೆ. ಹೀಗಾಗಿ ಇಲ್ಲಿ ವರ್ಷಕ್ಕೆ ಎರಡನೇ ಬಾರಿಗೆ ಧ್ವಜಾರೋಹಣ ನೆರವೇರಿಸುವುದು ವಿಶೇಷ ಎಂದು ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹೇಳಿದರು.
ಕಲ್ಯಾಣ ಕರ್ನಾಟಕಕ್ಕೆ ಸರ್ಕಾರ ವಿಶೇಷ ಒತ್ತು ನೀಡಿದೆ: ಸಹಾಯಕ ಆಯುಕ್ತ ಕನಕರೆಡ್ಡಿ - Welfare Karnataka
ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು ನೀಡಿದೆ. ಇದನ್ನು ಈ ಭಾಗದ ಯುವಕರು ಸದುಪಯೋಗ ಪಡಿಸಿಕೊಳ್ಳಬೇಕು. ಮುಖ್ಯವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಈ ಭಾಗದ ಯುವಕರಿಗೆ ಮೀಸಲಾತಿ ಇದೆ. ಆರೋಗ್ಯ, ಪ್ರಾದೇಶಿಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಹರಿದು ಬರುತ್ತಿದೆ.
ಕಲ್ಯಾಣ ಕರ್ನಾಟಕಕ್ಕೆ ಸರ್ಕಾರ ವಿಶೇಷ ಒತ್ತು ನೀಡಿದೆ: ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ
ನಗರದ ಚನ್ನಬಸವ ಸ್ವಾಮಿ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು ನೀಡಿದೆ. ಇದನ್ನು ಈ ಭಾಗದ ಯುವಕರು ಸದುಪಯೋಗ ಪಡಿಸಿಕೊಳ್ಳಬೇಕು.
ಮುಖ್ಯವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಈ ಭಾಗದ ಯುವಕರಿಗೆ ಮೀಸಲಾತಿ ಇದೆ. ಆರೋಗ್ಯ, ಪ್ರಾದೇಶಿಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಹರಿದು ಬರುತ್ತಿದೆ. ಸಂವಿಧಾನ ಬದ್ಧವಾಗಿ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.