ಗಂಗಾವತಿ: ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ಗೆ ಆಯ್ಕೆಯಾದ ತಾಲೂಕಿನ ಹಿರೇಬೆಣಕಲ್ ಹಾಗೂ ಚಿಕ್ಕಬೆಣಕಲ್ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಇಲ್ಲಿಂದ ತೆರಳುವಾಗ ಆಟೋ ಚಾಲಕರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ಗೆ ಸರ್ಕಾರಿ ಶಾಲಾ ಮಕ್ಕಳು ಆಯ್ಕೆ: ಆಟೋ ಚಾಲಕರಿಂದ ಪ್ರೋತ್ಸಾಹ
ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ಗೆ ಆಯ್ಕೆಯಾದ ತಾಲೂಕಿನ ಹಿರೇಬೆಣಕಲ್ ಹಾಗೂ ಚಿಕ್ಕಬೆಣಕಲ್ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಇಲ್ಲಿಂದ ತೆರಳುವಾಗ ಆಟೋ ಚಾಲಕರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ಗೆ ಆಯ್ಕೆಯಾದ ಸರ್ಕಾರಿ ಶಾಲೆಯ ಮಕ್ಕಳು: ಆಟೋ ಚಾಲಕರಿಂದ ಪ್ರೋತ್ಸಾಹ
ಬೆಳಗಾವಿಯಲ್ಲಿ ನ.20ರಿಂದ ಆರಂಭವಾಗಲಿರುವ ಮೂರು ದಿನಗಳ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದೆ. ಕೊಪ್ಪಳದಲ್ಲಿ ನಡೆದ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಈ ಮಕ್ಕಳು ಆಯ್ಕೆಯಾಗಿದ್ದರು.
ತರಬೇತುದಾರ ಮಂಜುನಾಥ ನೇತೃತ್ವದಲ್ಲಿ ಬೆಳಗಾವಿಗೆ ತೆರಳಲು ಇಲ್ಲಿನ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಆಟೋ ಚಾಲಕರು ಮಕ್ಕಳನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು. ರಾಜ್ಯಮಟ್ಟದಲ್ಲಿ ಮೊದಲ ಸ್ಥಾನ ಪಡೆಯುವಂತೆ ಹುರಿದುಂಬಿಸಿ ಬೀಳ್ಕೊಟ್ಟರು.