ಕರ್ನಾಟಕ

karnataka

ETV Bharat / state

ಕೊರೊನಾ ಮುಕ್ತ ಕೊಪ್ಪಳ ಜಿಲ್ಲೆ ಅಭಿಯಾನಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ - ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ಸೋಂಕು ಹರಡುವಿಕೆ ಮತ್ತು ಇದರಿಂದಾಗುತ್ತಿರುವ ಸಾವಿಗೆ ಸೋಂಕು ಮಾತ್ರ ಕಾರಣವಲ್ಲ. ಇದಕ್ಕೆ ಜನರ ನಿರ್ಲಕ್ಷ್ಯವೂ ಪ್ರಮುಖ ಕಾರಣವಾಗಿದೆ. ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದರೆ ತಕ್ಷಣ ಪರೀಕ್ಷೆಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

Govisiddheshwara Shri, Corona Free Koppal District Campaign
ಕೊರೊನಾ ಮುಕ್ತ ಕೊಪ್ಪಳ ಜಿಲ್ಲೆ ಅಭಿಯಾನ, ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

By

Published : Sep 5, 2020, 2:22 PM IST

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ಕಡಿಮೆ ಮಾಡಲು ಜಿಲ್ಲಾಡಳಿತ ಕೊರೊನಾ ಮುಕ್ತ ಕೊಪ್ಪಳ ಜಿಲ್ಲೆ ಅಭಿಯಾನ ಪ್ರಾರಂಭಿಸಿದೆ. ಜಿಲ್ಲೆಯಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿರುವ ಸ್ಥಳಗಳಲ್ಲಿ ಈ ಅಭಿಯಾನ ನಡೆಯುತ್ತಿದ್ದು, ಭಾಗ್ಯನಗರದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಕೊರೊನಾ ಮುಕ್ತ ಕೊಪ್ಪಳ ಜಿಲ್ಲೆ ಅಭಿಯಾನಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ನೇತೃತ್ವದಲ್ಲಿ ಕೊರೊನಾ ಮುಕ್ತ ಕೊಪ್ಪಳ ಜಿಲ್ಲೆ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಭಾಗ್ಯನಗರದ ವಿವಿಧೆಡೆ ಸಂಚರಿಸಿ ಕೊರೊನಾ ಕುರಿತಂತೆ ಜಾಗೃತಿ ಮೂಡಿಸಲಾಯಿತು. ಅಲ್ಲದೆ ಸೋಂಕು ಹರಡುವಿಕೆಯನ್ನು ಕಂಟ್ರೋಲ್ ಮಾಡಲು ಮತ್ತು ಜನರು ಪರೀಕ್ಷೆಗೊಳಪಡುವಂತೆ ಕರೆ ನೀಡಲಾಯಿತು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ಸೋಂಕು ಹರಡುವಿಕೆ ಮತ್ತು ಇದರಿಂದಾಗುತ್ತಿರುವ ಸಾವಿಗೆ ಸೋಂಕು ಮಾತ್ರ ಕಾರಣವಲ್ಲ. ಇದಕ್ಕೆ ಜನರ ನಿರ್ಲಕ್ಷ್ಯವೂ ಪ್ರಮುಖ ಕಾರಣವಾಗಿದೆ. ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದರೆ ತಕ್ಷಣ ಪರೀಕ್ಷೆಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು. ಪರೀಕ್ಷೆಗೆ ಒಳಪಟ್ಟ ಬಳಿಕ ಒಂದು ವೇಳೆ ಪಾಸಿಟಿವ್ ಬಂದರೆ ಜನರು, ಅಕ್ಕಪಕ್ಕದವರು ಏನಂತಾರೆ ಎಂಬುದರ ಬಗ್ಗೆ ಯೋಚನೆ ಮಾಡದೆ ನಿಮ್ಮ ಆರೋಗ್ಯದ ಬಗ್ಗೆ ಯೋಚನೆ ಮಾಡಿ.

ಸೋಂಕು ತಗುಲಿದ ಬಳಿಕ ಏಳು ದಿನ ಕ್ವಾರಂಟೈನ್​​ನಲ್ಲಿದ್ದು ಗುಣಮುಖರಾಗುವುದು ಒಳ್ಳೆಯದೋ ಅಥವಾ ಎಪ್ಪತ್ತು ವರ್ಷದ ಜೀವನ ಕಳೆದುಕೊಳ್ಳುವುದು ಸರಿಯೋ ಎಂಬುದನ್ನು ಯೋಚನೆ ಮಾಡಿ. ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಳಿಸಿ ಜನರು ಮಾಸ್ಕ್ ಧರಿಸಿ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಬೇಕು. ಈ ಮೂಲಕ ಜಿಲ್ಲೆಯನ್ನು ಕೊರೊನಾ ಮುಕ್ತವನ್ನಾಗಿ ಮಾಡಬೇಕು ಎಂದು ಶ್ರೀಗಳು ಕರೆ ನೀಡಿದರು‌.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ್ ಎಂ.ಜಿ., ಉಪ ವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಸೇರಿದಂತೆ ಮೊದಲಾದವರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details