ಕೊಪ್ಪಳ:ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತಂತೆ ಯಾವುದೇ ಸರ್ಕಾರ ದಿಢೀರ್ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಈಗ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದ್ದು, ಜಯಮೃತ್ಯುಂಜಯ ಸ್ವಾಮೀಜಿಗಳ ಮನವೊಲಿಸುವ ಪ್ರಯತ್ನ ನಡೆದಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಅವರ ಸೂಚನೆಯಂತೆ ನಾನು, ಸಚಿವ ಮುರುಗೇಶ್ ನಿರಾಣಿ, ಸಿ.ಸಿ. ಪಾಟೀಲ್ ಸೇರಿಕೊಂಡು ಶ್ರೀಗಳ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇವೆ. ಮೀಸಲಾತಿ ಬಗ್ಗೆ ಕಾನೂನಾತ್ಮಕವಾಗಿ ಅಧ್ಯಯನ ಮಾಡಬೇಕಿದೆ. ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಬರಬೇಕಿದೆ. ಹೀಗಾಗಿ ಜಯಮೃತ್ಯುಂಜಯ ಸ್ವಾಮಿಗಳಲ್ಲಿ ನಾನು ಸರ್ಕಾರಕ್ಕೆ ಒಂದಿಷ್ಟು ಕಾಲವಕಾಶ ನೀಡುವಂತೆ ವಿನಂತಿ ಮಾಡುತ್ತೇನೆ ಎಂದರು.