ಕರ್ನಾಟಕ

karnataka

ETV Bharat / state

ಕಾಂಗ್ರೆಸ್-ಬಿಜೆಪಿ ಮಧ್ಯೆ ಹೈಡ್ರಾಮ: ಉಪಾಧ್ಯಕ್ಷ ಆಕಾಂಕ್ಷಿ ಹೈಜಾಕ್ - ಗ್ರಾಮ ಪಂಚಾಯಿತಿ ಚುನಾವಣೆ

ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಸಿಂದ್ಲಿ ಅವರನ್ನು ಬಿಜೆಪಿಗರು ಹೈಜಾಕ್ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಪ್ರಸಾದ್ ಆರೋಪಿಸಿದ್ದಾರೆ.

gram panchayat deputy president hijacking in Gangavati
ಉಪಾಧ್ಯಕ್ಷ ಆಕಾಂಕ್ಷಿ ಚಂದ್ರಶೇಖರ ಸಿಂದ್ಲಿ ಹೈಜಾಕ್

By

Published : Jan 28, 2021, 7:52 PM IST

ಗಂಗಾವತಿ: ಕನಕಗಿರಿ ವಿಧಾನಸಭಾ ಕ್ಷೇತ್ರ ಹಾಗೂ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಆಯ್ಕೆ ಅಂತಿಮ ಹಂತಕ್ಕೆ ತಲುಪಿರುವಾಗಲೇ ಉಪಾಧ್ಯಕ್ಷ ಸ್ಥಾನದ ಅಕಾಂಕ್ಷಿ ಹೈಜಾಕ್ ಆಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಒಟ್ಟು 13 ಸದಸ್ಯರಿರುವ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಾಗಿದ್ದು, ಲಕ್ಷ್ಮಿ ಯಮನೂರಪ್ಪ ನಾಯಕ ಅವರು ಅವಿರೋಧ ಆಯ್ಕೆ ಖಚಿತ ಎನ್ನಲಾಗಿದೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಚಂದ್ರಶೇಖರ ಸಿಂದ್ಲಿ ಎಂಬವರನ್ನು ಆಯ್ಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿಗರು ಹೈಜಾಕ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ತಂದೆ ಮೇಲೆ ಹಲ್ಲೆ‌ ಮಾಡಿದವನನ್ನು ಯಮಪುರಿಗೆ ಕಳಿಸಿದ ಮಕ್ಕಳು

13 ಸದಸ್ಯರ ಪೈಕಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ತಲಾ ಆರು ಅಭ್ಯರ್ಥಿಗಳು ಗೆದ್ದಿದ್ದಾರೆ. ಉಪಾಧ್ಯಕ್ಷ ಸ್ಥಾನದ ಅಕಾಂಕ್ಷಿ ಚಂದ್ರಶೇಖರ್ ಅವರು ಕಾಂಗ್ರೆಸ್ ಬೆಂಬಲದಿಂದ ಗೆಲುವು ಸಾಧಿಸಿದ್ದಾರೆ.

ABOUT THE AUTHOR

...view details