ಕುಷ್ಟಗಿ (ಕೊಪ್ಪಳ) :ಕುಷ್ಟಗಿ ತಾಲೂಕಿನ ಮೆಣೆದಾಳ ಗ್ರಾಮದ 2ನೇ ವಾರ್ಡ್‌ನಿಂದ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ವೀರಭದ್ರಪ್ಪ ಬಡಿಗೇರ (60) ಎಂಬುವರು ಶನಿವಾರದಂದು ಮೃತಪಟ್ಟಿದ್ದಾರೆ.
ಚುನಾವಣಾ ಸ್ಪರ್ಧಾ ಕಣದಲ್ಲಿದ್ದ ಅವರು, ಕೆಲ ದಿನಗಳ ಹಿಂದೆ ಮೆದುಳಿನ ಪಾರ್ಶ್ವವಾಯುವಿಗೆ ತುತ್ತಾಗಿ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ನಂತರ ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಕೊನೆಯುಸಿರೆಳೆದಿದ್ದಾರೆ.